ಸೋಮವಾರ, ಡಿಸೆಂಬರ್ 9, 2019
23 °C

ಕೋವಿಂದ್‌ ಗೆಲುವು ಖಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಂದ್‌ ಗೆಲುವು ಖಚಿತ

ನವದೆಹಲಿ: ದೇಶದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ಸೋಮವಾರ (ಜುಲೈ 17) ಮತದಾನ ನಡೆಯಲಿದೆ.

ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್‌ ಹಾಗೂ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮೀರಾ ಕುಮಾರ್‌ ಕಣದಲ್ಲಿದ್ದಾರೆ.

ಶೇ 63ರಷ್ಟು ಮತದಾರರರು ಬಿಹಾರದ ಮಾಜಿ ರಾಜ್ಯಪಾಲ ರಾಮನಾಥ ಕೋವಿಂದ್‌ ಅವರಿಗೆ ಈಗಾಗಲೇ ಬೆಂಬಲ ಘೋಷಿಸಿದ್ದಾರೆ. ಹಾಗಾಗಿ ಅವರು ಆಯ್ಕೆಯಾಗುವುದು ಬಹುತೇಕ ಖಚಿತ. ಲೋಕಸಭೆಯ ಮಾಜಿ ಸಭಾಧ್ಯಕ್ಷೆ ಮೀರಾ ಕುಮಾರ್‌ ಅವರಿಗೆ ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌, ಸಿಪಿಎಂ, ಎಸ್‌ಪಿ, ಬಿಎಸ್‌ಪಿ, ಜೆಡಿಎಸ್‌ ಸೇರಿದಂತೆ 16 ಪಕ್ಷಗಳು ಬೆಂಬಲ ನೀಡಿವೆ.

ಸಿದ್ಧತೆ ಪೂರ್ಣ:  ಈ ಮಧ್ಯೆ, ಮತದಾನಕ್ಕಾಗಿ ಸಂಸತ್‌ ಭವನ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)