ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಥೇನಿಯಂ ತೆರವಿಗೆ ಆಗ್ರಹ

Last Updated 16 ಜುಲೈ 2017, 19:30 IST
ಅಕ್ಷರ ಗಾತ್ರ

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ನರಸೀಪುರ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಪಾರ್ಥೇನಿಯಂ ಗಿಡ ಬೆಳೆದಿದ್ದು, ಇದರಿಂದ ಸೊಳ್ಳೆಗಳ ಕಾಟ ವಿಪರೀತಗೊಂಡಿದೆ. ಕೂಡಲೇ ಕಳೆಯನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

‘ಡೆಂಗಿ, ಚಿಕೂನ್‌ ಗುನ್ಯ ಹಾಗೂ ಮಲೇರಿಯಾ ರೋಗಗಳ ಭೀತಿಯಲ್ಲಿ ಬದುಕುವಂತಾಗಿದೆ. ಈ ಬಗ್ಗೆ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ’ ಎಂದು ಆರೋಪಿಸಿದರು.

‘ಸೋಂಪುರ ಜಿಲ್ಲಾ ಪಂಚಾಯಿತಿ ಸದಸ್ಯರ ಮನೆಯೂ ಆವರಣದ ಸಮೀಪದಲ್ಲೇ ಇದೆ. ಅವರು ಈ ಬಗ್ಗೆ ಗಮನ ಹರಿಸಿಲ್ಲ’ ಎಂದು ಗ್ರಾಮದ ನಿವಾಸಿ ರವಿ ದೂರಿದರು.

‘ಇಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಗಿಡಗಳನ್ನು ನೆಟ್ಟಿದ್ದಾರೆ. ಆದರೆ, ಕಳೆಯಿಂದಾಗಿ ಅವು ನಾಶವಾಗಿವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT