ಬುಧವಾರ, ಡಿಸೆಂಬರ್ 11, 2019
19 °C

‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಈ ವರ್ಷವೇ ಬಿಡುಗಡೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಈ ವರ್ಷವೇ ಬಿಡುಗಡೆ’

ಬೆಂಗಳೂರು: ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಈ ವರ್ಷದಲ್ಲೇ ಬಿಡುಗಡೆ ಮಾಡುತ್ತೇವೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಆಂಜನೇಯ ತಿಳಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮೀಕ್ಷಾ ವರದಿ ಸಿದ್ಧವಾಗಿದೆ. ಆದರೆ, ಅಲ್ಪಸ್ವಲ್ಪ ಮಾಹಿತಿಯನ್ನು ಸೇರಿಸಬೇಕಿದೆ. ಅಧಿಕಾರಿಗಳಿಂದ ಆ ಮಾಹಿತಿಯನ್ನು ತರಿಸಿಕೊಂಡು ವರದಿಗೆ ಸೇರಿಸಲಾಗುತ್ತದೆ. ಅದನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ವಿಧಾನ ಮಂಡಲದ  ಮುಂದಿಡಲಾಗುತ್ತದೆ. ಬಳಿಕ ವರದಿಯನ್ನು ಬಿಡುಗಡೆ ಮಾಡುತ್ತೇವೆ’ ಎಂದರು.

‘ಅನ್ಯಾಯಕ್ಕೊಳಗಾಗಿರುವ ಸಮುದಾಯಗಳಿಗೆ ಸವಲತ್ತು ಕೊಡಲು ಈ ಸಮೀಕ್ಷೆಯನ್ನು ನಡೆಸಿದ್ದೇವೆ. ಇದಕ್ಕೂ ಚುನಾವಣೆಗೂ ಸಂಬಂಧವಿಲ್ಲ’ ಎಂದು ಹೇಳಿದರು.

‘ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಬೇಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ  ಸೂಚಿಸಿಲ್ಲ. ಈ ವಿಷಯದಲ್ಲಿ ಯಾರೂ ಒತ್ತಡ ಹೇರಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿ (+)