ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೇಕೆದಾಟು’ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಗೋವಾ, ತಮಿಳುನಾಡು ಮುಖ್ಯಮಂತ್ರಿಗಳು ಮತ್ತು ರಾಜ್ಯದ ಮುಖ್ಯಮಂತ್ರಿ ವಿರುದ್ಧ ಘೋಷಣೆ, ಪ್ರತಿಕೃತಿ ದಹನ
Last Updated 17 ಜುಲೈ 2017, 5:36 IST
ಅಕ್ಷರ ಗಾತ್ರ

ರಾಮನಗರ: ಕಳಸಾ–ಬಂಡೂರಿ, ಮಹಾದಾಯಿ ಯೋಜನೆ ಹಾಗೂ ಮೇಕೆ ದಾಟು ಯೋಜನೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ನಗರದ ಐಜೂರು ವೃತ್ತದಲ್ಲಿ ಭಾನು ವಾರ ಪ್ರತಿಭಟನೆ ನಡೆಸಲಾಯಿತು.

ಗೋವಾ, ತಮಿಳುನಾಡು ಮುಖ್ಯ ಮಂತ್ರಿಗಳು ಮತ್ತು ರಾಜ್ಯದ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಮತ್ತು ತಮಿಳುನಾಡು ಎ.ಪಳನಿ ಸ್ವಾಮಿ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೊಶ ವ್ಯಕ್ತಪಡಿಸಿದರು.

‘ಕಳಸಾ ಬಂಡೂರಿ, ಮಹಾದಾಯಿ ಯೋಜನೆ ಜಾರಿಗೆ ಆಗ್ರಹಿಸಿ ದಶಕದಿಂದಲೂ ಹೋರಾಟ ನಡೆಯುತ್ತಲಿದೆ. ನದಿ ಜೋಡಣೆ ಕಾರ್ಯ ಕೈಗೆತ್ತಿಕೊಂಡಾಗ ನೆರೆಯ ರಾಜ್ಯ ಗೋವಾ ಮೂರು ಬಾರಿ ಅಡ್ಡಗಾಲು ಹಾಕಿದೆ’ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬೇವೂರು ಯೋಗೀಶ್‌ಗೌಡ ಅಸಮಾಧಾನ ವ್ಯಕ್ತಪಡಿಸಿದರು.

‘ಕರ್ನಾಟಕ ರಾಜ್ಯ ಸ್ಥಾಪನೆಯಾ ದಾಗಿನಿಂದ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಲಾಗಿದೆ ಎಂದು ದೂರಿದರ.

ಗೋವಾ ಮತ್ತು ಆಂಧ್ರ ರಾಜ್ಯದೊಂದಿಗೆ ನೀರಿನ ವಿಚಾರ ವಾಗಿ ಜಗಳವಾದಾಗಲೆಲ್ಲಾ ನಮಗೆ ನಾವು ಸೋಲು ತ್ತಿದ್ದೇವೆ. ಉತ್ತರ ಕರ್ನಾ ಟಕದ ಬಹು ತೇಕ ಪಕ್ಷದ ರಾಜಕಾರಣಿ ಗಳು ಕಳಸಾ ಬಂಡೂರಿ, ಮಹಾದಾಯಿ ಯೋಜನೆ ಹೆಸರಿನಲ್ಲಿ ಮತ ಹಾಕಿಸಿ ಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ್ದಾರೆಯೇ ಹೊರತು ನದಿ ಜೋಡಣೆ ಕಾರ್ಯಕ್ಕೆ ಮುಂದಾಗಿಲ್ಲ’ ಎಂದು ದೂರಿದರು.

‘ಮಹದಾಯಿ ನದಿ ಜೋಡಣೆಗಾಗಿ ರೈತರು ಹಲವು ವರ್ಷಗಳಿಂದ ನಿರಂತರ ವಾಗಿ ಹೋರಾಟ ಮಾಡುತ್ತಿದ್ದಾರೆ. ಇವರ ಬಹುದಿನದ ಬೇಡಿಕೆಯನ್ನು ಈಡೇರಿಸದಿದ್ದರೆ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರಲಿದೆ. ನಮ್ಮನಮ್ಮಲ್ಲಿ ಏಕತೆ ಅನ್ನುವುದು ಆಗ ಕಂಡುಬರುವುದಿಲ್ಲ. ಈಗಲಾದರೂ ಸರ್ಕಾರ ಉತ್ತರ ಕರ್ನಾಟಕದ ಬಗ್ಗೆ ತಾತ್ಸಾರ ಮನೋಭಾವನೆ ಬಿಡಬೇಕು’ ಎಂದು ಆಗ್ರಹಿಸಿದರು.

‘ಎರಡು ವರ್ಷಗಳಿಂದ ಉತ್ತರ ಕರ್ನಾಟಕದಲ್ಲಿ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಕಳಸಾ ಬಂಡೂರಿ ಹೋರಾಟ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಹೋರಾಟದ ಸ್ವರೂಪ ತ್ರೀವವಾಗುತ್ತಿದೆ. ಇವರ ಹೋರಾಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪದೇ ಪದೇ ಕಿರಿಕಿರಿ ಉಂಟು ಮಾಡುತ್ತಿರುವ ತಮಿಳುನಾಡಿಗೆ ಕಾನೂನಾತ್ಮಕವಾಗಿ ತಕ್ಕ ಉತ್ತರ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ’ ಎಂದು ಹರಿಹಾಯ್ದರು.

ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷ ದಿನೇಶ್, ಪದಾಧಿಕಾರಿಗಳಾದ ರಮೇಶ್, ಕೃಷ್ಣೇಗೌಡ, ವಿಘ್ನೇಶ್, ಜಾಕೀರ್, ಪ್ರದೀಪ್‌, ಮೀನಾ, ರಂಜಿತ್‌, ಮಂಗಳಮ್ಮ, ಕುಮಾರ್, ಹನು ಮಾರಯ್ಯ, ಸಿದ್ದಪ್ಪಾಜಿ, ವೆಂಕಟೇಶ್, ರಾಮು, ರಂಗಪ್ಪ, ನಾಗರಾಜು, ತಮ್ಮೇಗೌಡ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

**

ಕಪ್ಪು ಬಾವುಟ ಪ್ರದರ್ಶನ

ನೀರಾವರಿ ಯೋಜನೆಗಳನ್ನು ಜಾರಿಗೊಳಿಸದಿದ್ದರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಚಿವರಿಗೆ ಕಪ್ಪು ಬಾವುಟವನ್ನು ಪ್ರದರ್ಶಿಸಲಾಗುವುದು’ ಎಂದು ಬೇವೂರು ಯೋಗೀಶ್‌ಗೌಡ ಎಚ್ಚರಿಸಿದರು.

ಕಳಸಾ ಬಂಡೂರಿ ಮತ್ತು ಮೇಕೆದಾಟು ಯೋಜನೆಗಳು ಉತ್ತರ ಮತ್ತು ದಕ್ಷಿಣ ಕರ್ನಾಟಕ ಲಕ್ಷಾಂತರ ರೈತ ಕುಟುಂಬಗಳ ಜೀವನವನ್ನು ಬದಲಿಸುತ್ತವೆ. ಜತೆಗೆ ಕುಡಿಯುವ ನೀರಿನ ಬವಣೆಯನ್ನು ನೀಗಿಸುತ್ತದೆ. ಆದ್ದರಿಂದ ಸಿದ್ದರಾಮಯ್ಯ ಅವರ ಸರ್ಕಾರ ತಮಗಿರುವ ಆರು ತಿಂಗಳ ಕಾಲಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲಿ. ಎಲ್ಲಾ ಅಡೆತಡೆಗಳನ್ನು ಮೀರಿ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT