ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಸಾಧ್ಯತೆ

Last Updated 18 ಜುಲೈ 2017, 8:24 IST
ಅಕ್ಷರ ಗಾತ್ರ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸೋಮವಾರ ಸಂಜೆ ಬಿಜೆಪಿಯ ಸಂಸದೀಯ ಮಂಡಳಿ ಸಭೆ ಕರೆಯಲಾಗಿದೆ.

ವೆಂಕಯ್ಯ ನಾಯ್ಡು ಅವರು ಸದ್ಯ ವಸತಿ ಮತ್ತು ನಗರಾಭಿವೃದ್ಧಿ, ಮಾಹಿತಿ ಮತ್ತು ಪ್ರಸಾರ ಖಾತೆ ನಿರ್ವಹಿಸುತ್ತಿದ್ದಾರೆ. ಅವರ ಹೆಸರನ್ನು ಉಪರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯನ್ನಾಗಿ ಘೋಷಿಸುವುದು ಬಹುತೇಕ ಖಚಿತ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ಚುನಾವಾಣೆ ಆಗಸ್ಟ್‌ 05ರಂದು ನಡೆಯಲಿದ್ದು, ಮಹರಾಷ್ಟ್ರ ರಾಜ್ಯಪಾಲ ಸಿ. ವಿದ್ಯಾಸಗರ್‌ ರಾವ್‌ ಅವರ ಹೆಸರೂ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯಲ್ಲಿದೆ.

ನಾಮ ಪತ್ರ ಸಲ್ಲಿಕೆಗೆ ಜುಲೈ 18ಕೊನೆಯ ದಿನವಾಗಿದ್ದು, ಸದ್ಯ ಕಾರ್ಯನಿರ್ವಹಿಸುತ್ತಿರುವ ಹಮೀದ್‌ ಅನ್ಸಾರಿ ಅವರ ಅಧಿಕಾರ ಅವಧಿ ಆಗಸ್ಟ್‌ 10ಕ್ಕೆ ಕೊನೆಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT