ಭಾನುವಾರ, ಡಿಸೆಂಬರ್ 8, 2019
21 °C

ಆಶ್ರಯನಗರ ಪ್ರೌಢಶಾಲೆಯ ಕೊಠಡಿಗಳ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಶ್ರಯನಗರ ಪ್ರೌಢಶಾಲೆಯ ಕೊಠಡಿಗಳ ಉದ್ಘಾಟನೆ

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರ ವ್ಯಾಪ್ತಿಯ ಆಶ್ರಯನಗರ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಿರ್ಮಿಸಿದ್ದ ಮೂರು ಕೊಠಡಿಗಳನ್ನು ಉದ್ಘಾಟಿಸಲಾಯಿತು.

ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕಗಳು ಹಾಗೂ ದಿನಚರಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ಶಾಸಕ ಮುನಿರತ್ನ ಮಾತನಾಡಿ, ‘ಮಕ್ಕಳು ಕಲಿತರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ. ಅವರ ಶೈಕ್ಷಣಿಕ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದರು.

ಉಪ ಪ್ರಾಂಶುಪಾಲ ಚಂದ್ರಯ್ಯ, ‘ಶಾಲೆಯಲ್ಲಿ 865 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಎಸ್ಸೆಸ್ಸೆಲ್ಸಿಯಲ್ಲಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯಲ್ಲಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)