ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಗೂರು ಶಾಲೆಯ ವಿದ್ಯಾರ್ಥಿ ಸಂಘಗಳಿಗೆ ಚಾಲನೆ

Last Updated 17 ಜುಲೈ 2017, 20:11 IST
ಅಕ್ಷರ ಗಾತ್ರ

ಬೆಂಗಳೂರು: ಬೇಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ವಿದ್ಯಾರ್ಥಿ ಸಂಘಗಳಿಗೆ ಚಾಲನೆ ನೀಡಲಾಯಿತು.

ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವುದು, ಸಾಮಾಜಿಕ ಪ್ರಜ್ಞೆ ಮೂಡಿಸುವುದು ಹಾಗೂ ರಾಜಕೀಯ ವ್ಯವಸ್ಥೆ ಬಗ್ಗೆ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ಎಲ್ಲ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿ ಸಂಘಗಳನ್ನು ಸ್ಥಾಪಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸೂಚಿಸಿತ್ತು.

ಶಾಲಾ ಸಂಸತ್, ಇಕೋ ಕ್ಲಬ್, ಸಾಹಿತ್ಯ ಸಂಘ, ಗಣಿತ ಸಂಘ, ವಿಜ್ಞಾನ ಸಂಘ, ಆರೋಗ್ಯ ಸಂಘಗಳನ್ನು ಸ್ಥಾಪಿಸಲಾಗಿತ್ತು.

ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳು ತಮ್ಮ ಸಂಘದ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು. ಚುನಾವಣೆಯಲ್ಲಿ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿರುವುದು ವಿಶೇಷ.

ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕಗಳನ್ನು ವಿತರಿಸಲಾಯಿತು. ‘ಶಾಲೆಯ ಎಲ್ಲ ಮಕ್ಕಳಿಗೆ ಸಮವಸ್ತ್ರಗಳನ್ನು ಕೊಡುಗೆಯಾಗಿ ಶೀಘ್ರದಲ್ಲೇ
ನೀಡುತ್ತೇನೆ’ ಎಂದು ಬೇಗೂರು ವಾರ್ಡ್‌ನ ಸದಸ್ಯ ಎಂ.ಆಂಜನಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT