ಶನಿವಾರ, ಡಿಸೆಂಬರ್ 7, 2019
16 °C
ಉಪರಾಷ್ಟ್ರಪತಿ ಚುನಾವಣೆ: ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಕೆ

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿ ಸ್ಮೃತಿ ಇರಾನಿ, ನಗರಾಭಿವೃದ್ಧಿ ಹೆಚ್ಚುವರಿ ಹೊಣೆ ಹೊತ್ತ ತೋಮರ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿ ಸ್ಮೃತಿ ಇರಾನಿ, ನಗರಾಭಿವೃದ್ಧಿ ಹೆಚ್ಚುವರಿ ಹೊಣೆ ಹೊತ್ತ ತೋಮರ್‌

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿ ಸ್ಮೃತಿ ಇರಾನಿ ಹಾಗೂ ಎನ್‌ಎಸ್‌ ತೋಮರ್‌ ನಗರಾಭಿವೃದ್ಧಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು (68) ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಿರ್ವಹಿಸುತ್ತಿದ್ದ ಖಾತೆಗಳ ಹೊಣೆಯನ್ನು ಹೆಚ್ಚುವರಿಯಾಗಿ ತೋಮರ್‌ ಹಾಗೂ ಸ್ಮೃತಿ ಇರಾನಿ ಅವರಿಗೆ ವಹಿಸಲಾಗಿದೆ.

ವೆಂಕಯ್ಯ ನಾಯ್ಡು ವಸತಿ ಮತ್ತು ನಗರಾಭಿವೃದ್ಧಿ, ಮಾಹಿತಿ ಮತ್ತು ಪ್ರಸಾರ ಖಾತೆಗಳನ್ನು ಹೊಂದಿದ್ದರು. ಕೇಂದ್ರ ಜವಳಿ ಖಾತೆ ಸಚಿವರಾಗಿರುವ ಸ್ಮೃತಿ ಇರಾನಿ ಅವರಿಗೆ ಮಾಹಿತಿ ಮತ್ತು ಪ್ರಸಾರ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ. ಈಗಾಗಲೇ ಗ್ರಾಮೀಣಾಭಿವೃದ್ಧಿ ಖಾತೆ ಹೊಂದಿರುವ ಎನ್‌ಎಸ್‌ ತೋಮರ್‌ ಅವರಿಗೆ ನಗರಾಭಿವೃದ್ಧಿ ಖಾತೆಯನ್ನೂ ವಹಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್‌ ಮಾಡಿದೆ.

ನಾಮಪತ್ರ ಸಲ್ಲಿಕೆ:  ಎನ್‌ಡಿಎ ಅಭ್ಯರ್ಥಿ ವೆಂಕಯ್ಯನಾಯ್ಡು ಮಂಗಳವಾರ ಚುನಾವಣಾ ಆಧಿಕಾರಿಗಳಿಗೆ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ  ಸಲ್ಲಿಸಿದ್ದಾರೆ. ಆಗಸ್ಟ್‌ 5ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. 18 ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಗಾಂಧಿ ಕಣದಲ್ಲಿದ್ದಾರೆ.

ಪ್ರತಿಕ್ರಿಯಿಸಿ (+)