ಬುಧವಾರ, ಡಿಸೆಂಬರ್ 11, 2019
24 °C

ಪ್ರಾಮಾಣಿಕ ಅಧಿಕಾರಿಗಳ ರಕ್ಷಣೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಪ್ರಾಮಾಣಿಕ ಅಧಿಕಾರಿಗಳ ರಕ್ಷಣೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ

ನವದೆಹಲಿ: ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಮತ್ತು ರಾಜಕೀಯ ಪ್ರೇರಿತ ಹತ್ಯೆ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸಂಸತ್‌ ಭವನದ ಎದುರು ರಾಜ್ಯ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು.

ಮಂಗಳವಾರ ಬೆಳಗ್ಗೆ ಸಂಸತ್‌ ಭವನದ ಎದುರು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಬಳಿಕ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿ ಮಾಡಿ ಯಡಿಯೂರಪ್ಪ, ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳನ್ನು ರಕ್ಷಣೆ ಮಾಡಬೇಕು ಹಾಗೂ ರಾಜಕೀಯ ಪ್ರೇರಿತವಾಗಿ 24 ಕೊಲೆಗಳು ನಡೆದಿವೆ. ಈ ಕೊಲೆ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ರಾಷ್ಟ್ರೀಯ ತನಿಖಾ ಸಂಸ್ಥೆಗೆವಹಿಸಬೇಕು ಎಂದು ಮನವಿ ಪತ್ರವನ್ನು ಸಲ್ಲಿಸಿದರು.

ಪ್ರತಿಭಟನೆ ವೇಳೆ ರಾಜ್ಯದ ಎಲ್ಲ ಬಿಜೆಪಿ ಸಂಸದರು ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)