ಸೋಮವಾರ, ಡಿಸೆಂಬರ್ 16, 2019
25 °C
12ಕ್ಕೂ ಹೆಚ್ಚು ಮಂದಿಗೆ ಗಾಯ

ಶಿಥಿಲಾವಸ್ಥೆಯಲ್ಲಿದ್ದ 3 ಅಂತಸ್ತಿನ ಕಟ್ಟಡ ಕುಸಿದು ನಾಲ್ಕು ಮಂದಿ ಸಾವು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಶಿಥಿಲಾವಸ್ಥೆಯಲ್ಲಿದ್ದ 3 ಅಂತಸ್ತಿನ ಕಟ್ಟಡ ಕುಸಿದು ನಾಲ್ಕು ಮಂದಿ ಸಾವು

ಕರಾಚಿ: ಶಿಥಿಲಾವಸ್ಥೆಯಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಮಹಿಳೆ, ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಇಲ್ಲಿನ ಲಿಯಾಕ್ವತಾಬಾದ್‌ನಲ್ಲಿ ನಡೆದಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕೆಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಕಟ್ಟಡದಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು. ಕುಸಿದಿರುವ ಕಟ್ಟಡವು ಕರಾಚಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಪಟ್ಟಿಯಲ್ಲಿ ಇರಲಿಲ್ಲ.

ಪ್ರತಿಕ್ರಿಯಿಸಿ (+)