ಶುಕ್ರವಾರ, ಡಿಸೆಂಬರ್ 6, 2019
17 °C

ಕಾರಾಗೃಹದಲ್ಲಿ ಐಷಾರಾಮಿ ಜೀವನ ನಡೆಸಲು ಅವಕಾಶವಿಲ್ಲ: ಸಚಿವ ರಮೇಶ್‌ ಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಾಗೃಹದಲ್ಲಿ ಐಷಾರಾಮಿ ಜೀವನ ನಡೆಸಲು ಅವಕಾಶವಿಲ್ಲ: ಸಚಿವ ರಮೇಶ್‌ ಕುಮಾರ್‌

ಕೋಲಾರ: ‘ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಲೋಪ ಆಗಿದೆ. ಅಲ್ಲಿ ಎಲ್ಲಾ ವ್ಯವಸ್ಥೆ ಸರಿಯಿಲ್ಲ. ನ್ಯಾಯಯುತ ತನಿಖೆ ದೃಷ್ಟಿಯಿಂದ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಆರ್.ರಮೇಶ್‌ಕುಮಾರ್ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಕ್ಷ ಅಧಿಕಾರಿಗಳು ಎಂದರೆ ಸರ್ವಾಧಿಕಾರಿಗಳಲ್ಲ. ಅವರು ಅಧಿಕಾರಿಗಳೇ. ಐಪಿಎಸ್ ಅಧಿಕಾರಿಗಳಾಗಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದು ಸರಿಯಲ್ಲ’ ಎಂದು ಡಿಜಿಪಿ ಸತ್ಯನಾರಾಯಣರಾವ್‌ ಮತ್ತು ಡಿಐಜಿ ರೂಪಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಪರಪ್ಪನ ಅಗ್ರಹಾರ ಕಾರಾಗೃಹದ ಕೈದಿಗಳಿಗೆ ಐಷಾರಾಮಿ ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂಬುದು ತಪ್ಪು ಕಲ್ಪನೆ. ಕಾರಾಗೃಹ ಪ್ರಕರಣ ಇನ್ನು ತನಿಖೆ ಹಂತದಲ್ಲಿದೆ. ಹೀಗಾಗಿ ಆ ಬಗ್ಗೆ ಹೆಚ್ಚು ಮಾತನಾಡುವುದು ಸರಿಯಲ್ಲ’ ಎಂದರು.

ಪ್ರತಿಕ್ರಿಯಿಸಿ (+)