ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ನೇಮಕ: ತಿಂಗಳ ಅಂತ್ಯಕ್ಕೆ ಅಧಿಸೂಚನೆ: ತನ್ವೀರ್ ಸೇಠ್

Last Updated 18 ಜುಲೈ 2017, 19:30 IST
ಅಕ್ಷರ ಗಾತ್ರ

ದಾವಣಗೆರೆ: 10 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಈ ತಿಂಗಳ ಅಂತ್ಯಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.

ನೇಮಕಕ್ಕೆ ಹಣಕಾಸು ಇಲಾಖೆ ಹಾಗೂ ಸಚಿವ ಸಂಪುಟ ಒಪ್ಪಿಗೆ ಸೂಚಿಸಿವೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಿಕ್ಷಕರ ಹುದ್ದೆಗಳಿಗೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪರಿಗಣಿಸಲಾಗುವುದು. ಒಬ್ಬ ಶಿಕ್ಷಕ ಎರಡು ವಿಷಯಗಳನ್ನು ಬೋಧನೆ ಮಾಡಲು ಅನುಕೂಲವಾಗುವಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ದರ್ಜೆಯ ಅಧಿಕಾರಿಗಳ ವರ್ಗಾವಣೆ ಆದೇಶಕ್ಕೆ ಕೆಲವು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಆಕ್ಷೇಪಿಸಿದ್ದಾರೆಂಬ ಮಾಹಿತಿ ಇದೆ. ಆದರೆ, ಎಲ್ಲಾ ನಿಯಮಾವಳಿಗಳನ್ನು ಅನುಸರಿಸಿಯೇ ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು.

184 ಅಧಿಕಾರಿಗಳು ಮೊದಲ ಬಾರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗುತ್ತಿದ್ದಾರೆ. ಅಲ್ಲದೇ, ಭ್ರಷ್ಟಾಚಾರ, ಸ್ವಜನಪಕ್ಷಪಾತಗಳಲ್ಲಿ ತೊಡಗಿರುವ, ಬಹುಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿರುವ ಹಲವು ಅಧಿಕಾರಿಗಳನ್ನು ಬದಲಿಸಲಾಗಿದೆ ಎಂದು ಸೇಠ್ ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT