ಶನಿವಾರ, ಡಿಸೆಂಬರ್ 14, 2019
21 °C

₹11.23 ಕೋಟಿ ಮೌಲ್ಯದ ನಕಲಿ ನೋಟುಗಳ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

₹11.23 ಕೋಟಿ ಮೌಲ್ಯದ ನಕಲಿ ನೋಟುಗಳ ಪತ್ತೆ

ನವದೆಹಲಿ : ಗರಿಷ್ಠ ಮುಖ ಬೆಲೆಯ ನೋಟುಗಳ ರದ್ದತಿ ನಂತರ ಜುಲೈ 14ರವರೆಗೆ  ದೇಶದಲ್ಲಿ ಒಟ್ಟು ₹ 11.23 ಕೋಟಿ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿವೆ.

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ  ಅವರು ಮಂಗಳವಾರ ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

‘ರಾಷ್ಟ್ರೀಯ ಅಪರಾಧ ದಾಖಲೆ ಮಂಡಳಿ (ಎನ್‌ಸಿಆರ್‌ಬಿ) ಬಳಿ ಇರುವ ಮಾಹಿತಿ ಪ್ರಕಾರ, ಒಟ್ಟಾರೆ 1.57 ಲಕ್ಷ ಸಂಖ್ಯೆಯ ನಕಲಿ ನೋಟುಗಳು ಪತ್ತೆಯಾಗಿವೆ’ ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)