ಶನಿವಾರ, ಡಿಸೆಂಬರ್ 7, 2019
24 °C

ಬೀರಗೊಂಡನಹಳ್ಳಿ ಕೆರೆ ಒತ್ತುವರಿ ತೆರವಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀರಗೊಂಡನಹಳ್ಳಿ ಕೆರೆ ಒತ್ತುವರಿ ತೆರವಿಗೆ ಆಗ್ರಹ

ದಾಬಸ್‌ಪೇಟೆ: ‘ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಹೋಬಳಿಯ ಬೀರಗೊಂಡನಹಳ್ಳಿ ಕೆರೆಯ ಒತ್ತುವರಿಯನ್ನು ತೆರವುಗೊಳಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದರು.

‘ಗ್ರಾಮದ ಪ್ರಭಾವಿ ವ್ಯಕ್ತಿಗಳು ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಕೆರೆ ಜಾಗವನ್ನು ಸರ್ವೇ ಮಾಡಿ ಒತ್ತುವರಿ ತೆರವು ಮಾಡಬೇಕು’ ಎಂದು ಆಗ್ರಹಿಸಿದರು.

‘ಕೆರೆಯಲ್ಲಿ ಹೂಳು ತುಂಬಿದ್ದು, ಬೇಲಿಗಿಡಗಳು ಬೆಳೆದಿವೆ. ಇದರಿಂದ ಮಳೆ ನೀರು ಸಂಗ್ರಹಗೊಳ್ಳುತ್ತಿಲ್ಲ. ಕೆರೆಯನ್ನು ಅಭಿವೃದ್ಧಿ ಪಡಿಸುವ ಬದಲು, ಗಿಡಗಳನ್ನು ನೆಡಸಲಾಗಿದೆ’ ಎಂದು ದೂರಿದರು.

‘ಗಿಡಗಳನ್ನು ನೆಡಲು ಗುಂಡುತೋಪು, ಗೋಮಾಳ, ರಸ್ತೆ ಬದಿಯಲ್ಲಿ ಸಾಕಷ್ಟು ಜಾಗವಿದೆ. ಅದನ್ನು ಬಿಟ್ಟು ಕೆರೆಯ ಜಾಗದಲ್ಲಿ ಗಿಡಗಳನ್ನು ನೆಡಲಾ

ಗಿದೆ. ಇದರಿಂದ ಭೂಗಳ್ಳರಿಗೆ ಮತ್ತಷ್ಟು ಅನುಕೂಲವಾಗಿದೆ’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)