ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Last Updated 27 ಜುಲೈ 2017, 6:30 IST
ಅಕ್ಷರ ಗಾತ್ರ

ಪಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ, ರಾಜೀನಾಮೆ ನೀಡಿದ 24 ಗಂಟೆಗಳ ಒಳಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಂತಾಗಿದೆ.

ಉಪಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದರು. ಬಿಹಾರದ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ನಿತೀಶ್ ಅವರು ಕಳೆದ 12 ವರ್ಷಗಳಲ್ಲಿ 6 ಬಾರಿ ಬಿಹಾರದ ಮುಖ್ಯಮಂತ್ರಿಯಾದಂತಾಗಿದೆ.

ಬುಧವಾರ ಹಠಾತ್ ನಿರ್ಧಾರ ಕೈಗೊಂಡು ಆರ್‌ಜೆಡಿ, ಕಾಂಗ್ರೆಸ್ ಜತೆಗಿನ ಮೈತ್ರಿಕೂಟದಿಂದ ಹೊರಬಂದಿದ್ದ ನಿತೀಶ್ ಅವರು ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದರು. ಆರ್‌ಜೆಡಿ ನಾಯಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಿಂದಾಗಿ ನಿತೀಶ್ ಈ ನಿರ್ಧಾರ ಕೈಗೊಂಡಿದ್ದರು. 2014ರ ಲೋಕಸಭೆ ಚುನಾವಣೆ ಸಂದರ್ಭ ನಿತೀಶ್ ಅವರು ಎನ್‌ಡಿಎ ಜತೆ ಮೈತ್ರಿ ಮುರಿದುಕೊಂಡಿದ್ದರು.

ಪ್ರಮಾಣವಚನ ಸ್ವೀಕಾರ ಸಮಾರಂಭದ ವಿಡಿಯೊವನ್ನು ಎಎನ್‌ಐ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT