ಗುರುವಾರ , ಸೆಪ್ಟೆಂಬರ್ 23, 2021
22 °C

ಬಿಹಾರದ ಅಭಿವೃದ್ಧಿ ಕಾರ್ಯ ಎದುರು ನೋಡುತ್ತೇವೆ: ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಹಾರದ ಅಭಿವೃದ್ಧಿ ಕಾರ್ಯ ಎದುರು ನೋಡುತ್ತೇವೆ: ಪ್ರಧಾನಿ ಮೋದಿ

ನವದೆಹಲಿ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ತಿಳಿಸಿದ್ದಾರೆ.

ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಹಾ ಮೈತ್ರಿ ಮುರಿದುಕೊಂಡು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಎನ್‌ಡಿಎಗೆ ಮರಳಿದ ನಿತೀಶ್‌ ಕುಮಾರ್‌ ಅವರು 24 ಗಂಟೆಗಳ ಒಳಗಾಗಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

‘ಮುಖ್ಯಮಂತ್ರಿ ನಿತೀಶ್‌ ಕುಮಾರ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರಿಗೆ ಅಭಿನಂದನೆಗಳು. ಬಿಹಾರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಎದುರು ನೋಡುತ್ತೇವೆ’ ಎಂದು ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.