ಉಪರಾಷ್ಟ್ರಪತಿಯಾಗಿ ಎಂ.ವೆಂಕಯ್ಯ ನಾಯ್ಡು ಆಯ್ಕೆ

7

ಉಪರಾಷ್ಟ್ರಪತಿಯಾಗಿ ಎಂ.ವೆಂಕಯ್ಯ ನಾಯ್ಡು ಆಯ್ಕೆ

Published:
Updated:
ಉಪರಾಷ್ಟ್ರಪತಿಯಾಗಿ ಎಂ.ವೆಂಕಯ್ಯ ನಾಯ್ಡು ಆಯ್ಕೆ

ನವದೆಹಲಿ: ಸಂಸತ್‌ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಎಂ. ವೆಂಕಯ್ಯ ನಾಯ್ಡು ಆಯ್ಕೆಯಾದರು.

ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಿದ್ದ ಎಂ. ವೆಂಕಯ್ಯ ನಾಯ್ಡು ಅವರು 516 ಮತ ಪಡೆದಿದ್ದಾರೆ. ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು 244 ಮತ ಪಡೆದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆಗೆ ನಡೆದ ಮತದಾನದಲ್ಲಿ ಶೇಕಡಾ 98.21ರಷ್ಟು ಮತ ಚಲಾವಣೆಯಾಗಿವೆ. ಒಟ್ಟು 785 ಸಂಸದರ ಪೈಕಿ 771 ಮಂದಿ ಹಕ್ಕು ಚಲಾಯಿಸಿದ್ದಾರೆ ಸಹಾಯಕ ಚುನಾವಣಾ ಅಧಿಕಾರಿ ಮುಕುಲ್‌ ಪಾಂಡೆ ತಿಳಿಸಿದ್ದಾರೆ.

ಆಡಳಿತಾರೂಢ ಎನ್‌ಡಿಎಗೆ ಲೋಕಸಭೆಯಲ್ಲಿ ಬಹುಮತ ಇದೆ. ಹಾಗಾಗಿ ಎನ್‌ಡಿಎ ಅಭ್ಯರ್ಥಿ ಉಪರಾಷ್ಟ್ರಪತಿ ಆಗಲಿದ್ದಾರೆ ಎಂಬುದು ಬಹುತೇಕ ಖಚಿತವಾಗಿತ್ತು. ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರು ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಕಣದಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry