ಬಿಹಾರ ಪ್ರವಾಹ: 341ಕ್ಕೆ ಏರಿದ ಸಾವಿನ ಸಂಖ್ಯೆ

ಪಟ್ನಾ: ಬಿಹಾರದಲ್ಲಿ ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 314ಕ್ಕೆ ಏರಿದೆ. ಬಿಹಾರದ 18 ಜಿಲ್ಲೆಗಳಲ್ಲಿ ಪ್ರವಾಹದಿಂದ ಒಂದು ಕೋಟಿಗೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
1,085 ನಿರಾಶ್ರಿತರ ಕೇಂದ್ರಗಳಲ್ಲಿ 2.29 ಲಕ್ಷ ಜನ ಆಶ್ರಯ ಪಡೆದಿದ್ದಾರೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಇಲಾಖೆಯ ವಿಶೇಷ ಕಾರ್ಯದರ್ಶಿ ಅನಿರುದ್ಧ್ ಕುಮಾರ್ ತಿಳಿಸಿದ್ದಾರೆ.
ಪಟ್ನಾ, ಭಾಗಲ್ಪುರ, ಪೂರ್ಣಿಯಾ ಮತ್ತು ಗಯಾ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೋದಿ ವೈಮಾನಿಕ ಸಮೀಕ್ಷೆ
‘ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 26ರಂದು ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.