ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಡಿ ಕಾರ್ಮಿಕ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಪ್ರಕರಣ: ಆರೋಪಿ ಸೈನೈಡ್ ಮೋಹನ್‌ಗೆ ಜೀವಾವಧಿ ಶಿಕ್ಷೆ

Last Updated 15 ಸೆಪ್ಟೆಂಬರ್ 2017, 13:51 IST
ಅಕ್ಷರ ಗಾತ್ರ

ಮಂಗಳೂರು: ಪುತ್ತೂರು ತಾಲ್ಲೂಕಿನ ಪಟ್ರೆ ಮಜಲು ಗ್ರಾಮದ 22 ವರ್ಷ ವಯಸ್ಸಿನ ಬೀಡಿ ಕಾರ್ಮಿಕ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಸೈನೈಡ್‌ ತಿನ್ನಿಸಿ ಕೊಲೆ ಮಾಡಿದ್ದ ಕೆ. ಮೋಹನ್‌ ಕುಮಾರ್‌ ಅಲಿಯಾಸ್‌ ಸೈನೈಡ್‌ ಮೋಹನ್‌ಗೆ ನಗರದ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮೋಹನ್‌ ಅಪರಾಧಿ ಎಂದು ನ್ಯಾಯಾಧೀಶ ಡಿ.ಟಿ. ಪುಟ್ಟರಂಗಸ್ವಾಮಿ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು.

ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ₹ 26 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದರು.

ಪ್ರಕರಣಗಳ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ 20 ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿ ಬಳಿಕ ಸೈನೈಡ್ ನೀಡಿ ಕೊಲೆ ಮಾಡಿದ ಆರೋಪ ಮೋಹನ್ ಕುಮಾರ್ ಮೇಲಿತ್ತು. ಬಂಟ್ವಾಳ ಪೊಲೀಸರು 2009ರ ಅ. 21ರಂದು ಈತನನ್ನು ಬಂಧಿಸುವ ಮೂಲಕ ಸರಣಿ ಕೊಲೆ ಪ್ರಕರಣ ಬಯಲಿಗೆ ಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT