ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ: ಬ್ಯಾಟಿಂಗ್‌ ಆಯ್ಕೆ

ಮಂಗಳವಾರ, ಜೂನ್ 25, 2019
23 °C

ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ: ಬ್ಯಾಟಿಂಗ್‌ ಆಯ್ಕೆ

Published:
Updated:
ಭಾರತ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ: ಬ್ಯಾಟಿಂಗ್‌ ಆಯ್ಕೆ

ನಾಗ್ಪುರ: ಇಲ್ಲಿನ ವಿದರ್ಭ ಕ್ರಿಕೆಟ್‌ ಸಂಸ್ಥೆಯ ಅಂಗಳದಲ್ಲಿ ನಡೆಯುತ್ತಿರುವ ಭಾರತ –ಆಸ್ಟ್ರೇಲಿಯಾ ವಿರುದ್ಧದ ಐಸನೇ ಏಕದಿನ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.

ಭಾರತದ ವಿರುದ್ಧ ಟಾಸ್‌ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಈಗಾಗಲೇ 3–1ರಲ್ಲಿ ಮುನ್ನಡೆ ಸಾಧಿಸಿದೆ.

ಸರಣಿಯಲ್ಲಿ ‘ಹ್ಯಾಟ್ರಿಕ್‌’ ಗೆಲುವಿನ ಸಾಧನೆ ಬಳಿಕ ಮುಗ್ಗರಿಸಿರುವ ಭಾರತ ತಂಡ ಈಗ ಹಿಂದಿನ ನಿರಾಸೆಯಿಂದ ಮೈಕೊಡವಿ ನಿಲ್ಲುವ ಉತ್ಸಾಹದಲ್ಲಿದೆ.

ಭಾನುವಾರ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಐದನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಪಡೆ ಎದುರಾಳಿಗಳ ಸವಾಲು ಮೀರಿ ನಿಂತು 4–1ರಿಂದ ಸರಣಿ ಕೈವಶ ಮಾಡಿಕೊಳ್ಳಲು ಹಾತೊರೆಯುತ್ತಿದೆ.

ಬೆಂಗಳೂರಿನಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಜಯದ ತೋರಣ ಕಟ್ಟಿ ವಿಶ್ವಾಸದಿಂದ ಪುಟಿಯುತ್ತಿರುವ ಕಾಂಗರೂಗಳ ನಾಡಿನ ತಂಡ ವಿದರ್ಭ ಕ್ರಿಕೆಟ್‌ ಸಂಸ್ಥೆಯ ಅಂಗಳದಲ್ಲೂ ಜಯದ ಸಿಹಿ ಸವಿಯಲು ಹಂಬಲಿಸುತ್ತಿದೆ. ಹೀಗಾಗಿ ಅಂತಿಮ ಪಂದ್ಯ ರೋಚಕ ಹಣಾಹಣಿಗೆ ವೇದಿಕೆ ಕಲ್ಪಿಸಬಹುದೆಂಬ ನಿರೀಕ್ಷೆ ಅಭಿಮಾನಿಗಳದ್ದು.

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಆಸ್ಟ್ರೇಲಿಯಾ 10 ಓವರ್‌ಗಲ್ಲಿ ವಿಕೆಟ್‌ ನಷ್ಟವಿಲ್ಲದೆ 60 ರನ್‌ ಗಳಿಸಿದೆ. (ಡೇವಿಡ್‌ ವಾರ್ನರ್‌ ಬ್ಯಾಟಿಂಗ್‌ 29, ಆ್ಯರನ್‌ ಫಿಂಚ್‌ ಬ್ಯಾಟಿಂಗ್‌ 31 ರನ್‌)

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry