ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಒತ್ತಾಯ

ಮಂಗಳವಾರ, ಜೂನ್ 18, 2019
26 °C

ರಸ್ತೆ ಅಭಿವೃದ್ಧಿಗೆ ಗ್ರಾಮಸ್ಥರ ಒತ್ತಾಯ

Published:
Updated:

ಕೊಪ್ಪ: ಸಮೀಪದ ಹುರುಗಲವಾಡಿ ರಸ್ತೆ ಹಲವು ವರ್ಷಗಳಿಂದ ಹದಗೆಟ್ಟಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಹಲವು ಬಾರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ರಸ್ತೆ ದುರಸ್ತಿ ಮಾಡುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನಾವಾಗಿಲ್ಲ ಎಂದು ರೈತ ಮುಖಂಡ ಹುರುಗಲವಾಡಿ ಉಮೇಶ್‌ ಸೇರಿದಂತೆ ಗ್ರಾಮಸ್ಥರು ಆರೋಪಿಸಿದ್ದಾರೆ.

ಶಾಸಕರು ನಮ್ಮೂರಿನ ಅಭಿವೃದ್ಧಿ ಕಡೆಗಣಿಸಿದ್ದಾರೆ. ಹುರುಗಲವಾಡಿ ಪಕ್ಕದಲ್ಲಿರುವ ಕೊಪ್ಪ ಎನ್‌.ಎಸ್‌.ಎಲ್‌ ಸಕ್ಕರೆ ಕಾರ್ಖಾನೆಗೂ ರಸ್ತೆ ದುರಸ್ತಿ ಮಾಡಿಸಿಕೊಡುವಂತೆ ಮನವಿ ಮಾಡಿದರು ಯಾವುದೇ ಕ್ರಮ ಕೈಗೊಂಡಿಲ್ಲ.

ಸಕ್ಕರೆ ಕಾರ್ಖಾನೆಗೆ ಹುರುಗಲವಾಡಿ ಮುಖ್ಯರಸ್ತೆಯಿಂದ ಲಾರಿಗಳಲ್ಲಿ ವಾಹನಗಳಲ್ಲಿ ಕಬ್ಬು ಸಾಗಿಸಲಾಗುತ್ತದೆ. ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಸಂಚಾರ ಮಾಡಲು ತೊಂದರೆ ಆಗಿದೆ ಎಂದು ಅವರು ತಿಳಿಸಿದ್ದಾರೆ. ತಕ್ಷಣ ರಸ್ತೆಗೆ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry