ಮಂಗಳೂರಿನಲ್ಲಿ ದಸರಾ ವೈಭವ

ಬುಧವಾರ, ಜೂನ್ 26, 2019
28 °C

ಮಂಗಳೂರಿನಲ್ಲಿ ದಸರಾ ವೈಭವ

Published:
Updated:
ಮಂಗಳೂರಿನಲ್ಲಿ ದಸರಾ ವೈಭವ

ಮಂಗಳೂರು: ಇಲ್ಲಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ನೇತೃತ್ವದಲ್ಲಿ ನಡೆಯುತ್ತಿರುವ ವರ್ಣರಂಜಿತ ಮಂಗಳೂರು ದಸರಾ ಮೆರವಣಿಗೆಗೆ ಶನಿವಾರ ಸಂಜೆ 6.15ಕ್ಕೆ ಚಾಲನೆ ದೊರೆಯಿತು. ನವದುರ್ಗೆಯರು, ಗಣಪತಿ ಮತ್ತು ಶಾರದೆಯ ವಿಗ್ರಹಗಳನ್ನು ಹೊತ್ತ ಮೆರವಣಿಗೆಯು ನಗರದ ವಿವಿಧ ಪ್ರದೇಶಗಳನ್ನು ಹಾದು ಶನಿವಾರ ಬೆಳಿಗ್ಗೆ ಕುದ್ರೋಳಿ ದೇವಸ್ಥಾನದಲ್ಲಿ ಸಮಾಪ್ತಿಗೊಳ್ಳಲಿದೆ.

ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿಯ ಹಿರಿಯ ಮುಖಂಡರಾಗಿರುವ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಶನಿವಾರ ಸಂಜೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ದಸರಾ ಮೆರವಣಿಗೆಗೆ ಚಾಲನೆ ನೀಡಲಾಯಿತು. 70ಕ್ಕೂ ಹೆಚ್ಚು ಸ್ತಬ್ಧಚಿತ್ರಗಳು, 30ಕ್ಕೂ ಹೆಚ್ಚು ಹುಲಿ ಕುಣಿತದ ತಂಡಗಳು, ಚೆಂಡೆ, ಕೊಂಬು, ಕಹಳೆ ಸೇರಿದಂತೆ ಹಲವು ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ.

ರಾಜ್ಯದ ವಿವಿಧೆಡೆಯಿಂದ ಬಂದಿರುವ ಸಹಸ್ರಾರು ಮಂದಿ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ವಿದೇಶಿ ಪ್ರವಾಸಿಗರು ಕೂಡ ಈ ಬಾರಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆ ಪ್ರಯುಕ್ತ ಮಂಗಳೂರು ನಗರದ ಬಹುತೇಕ ಭಾಗಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ.

ಕುದ್ರೋಳಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಲೇಡಿಹಿಲ್‌ ಮಾರ್ಗವಾಗಿ ಸಾಗಿ ಎಂ.ಜಿ.ರಸ್ತೆ, ಹಂಪನಕಟ್ಟೆ, ರಥಬೀದಿ ಮೂಲಕ ಸಾಗಿ ಪುನಃ ಕುದ್ರೋಳಿಗೆ ಬರಲಿದೆ. ದಸರಾ ಮೆರವಣಿಯನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಸಾವಿರಾರು ಮಂದಿ ವೀಕ್ಷಿಸಿದರು. ಹಲವು ಸ್ಥಳಗಳಲ್ಲಿ ಮೆರವಣಿಗೆ ಸ್ವಾಗತಿಸಲು ವಿಶೇಷ ವೇದಿಕೆಗಳನ್ನು ಸಜ್ಜುಗೊಳಿಸಲಾಗಿತ್ತು. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry