ಯಡಿಯೂರಪ್ಪ ಅವರನ್ನು ಗೆಲ್ಲಿಸುವ ಭರವಸೆ

ಬುಧವಾರ, ಜೂನ್ 19, 2019
28 °C

ಯಡಿಯೂರಪ್ಪ ಅವರನ್ನು ಗೆಲ್ಲಿಸುವ ಭರವಸೆ

Published:
Updated:

ಇಂಡಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಇಂಡಿ ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೆ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸುತ್ತೇನೆ’ ಎಂದು ಮಾಜಿ ಶಾಸಕ ರವಿಕಾಂತ ಪಾಟೀಲ ಹೇಳಿದ್ದಾರೆ.

ಇತ್ತೀಚಿಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಯಡಿಯೂರಪ್ಪ ಅವರ ಯಾವ ಕ್ಷೇತ್ರದಲ್ಲಿಯೇ ಚುನಾವಣೆಗೆ ನಿಂತರೂ ಗೆಲ್ಲಿಸಲು ಶ್ರಮಿಸುತ್ತೇನೆ’ ಎಂದರು. ಒಂದು ವೇಳೆ ಚುನಾ ವಣೆಯಲ್ಲಿ ನಿಮಗೆ ಟಿಕೆಟ್ ನೀಡದಿದ್ದರೆ ಎನ್ನುವ ಪ್ರಶ್ನೆಗೆ ‘ ನನಗೆ ಬಿಜೆಪಿ ಖಂಡಿತಾ ಟಿಕೆಟ್ ನೀಡುತ್ತದೆ. ಆ ವಿಶ್ವಾಸ ನನಗಿದೆ’ ಎಂದರು.

‘ಟಿಕೆಟ್ ಲಭಿಸದೇ ಇದ್ದರೆ ಪಕ್ಷೇತರನಾಗಿ ಸ್ಪರ್ಧಿಸುವದಿಲ್ಲ. ಪಕ್ಷದ ಹಿರಿಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ನಾಗಿದ್ದೇನೆ. ಜೊತೆಗೆ ಬಿಜೆಪಿಗೆ ಬೆಂಬಲಿಸುತ್ತೇನೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry