ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15 ಸಾವಿರ ರೋಹಿಂಗ್ಯಾ ಮುಸ್ಲಿಮರಿಗೆ ಆಶ್ರಯ ನೀಡಲು ಬಾಂಗ್ಲಾದೇಶ ನಿರ್ಧಾರ

Last Updated 1 ಅಕ್ಟೋಬರ್ 2017, 13:10 IST
ಅಕ್ಷರ ಗಾತ್ರ

ಢಾಕಾ: ಮ್ಯಾನ್ಮಾರ್‌ ಗಡಿಗೆ ಹೊಂದಿಕೊಂಡಿರುವ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸವಿರುವ 15 ಸಾವಿರ ರೋಹಿಂಗ್ಯಾ ನಿರಾಶ್ರಿತರನ್ನು ತಾತ್ಕಾಲಿಕ ಶಿಬಿರಗಳಿಗೆ ಕಳುಹಿಸಲು ಬಾಂಗ್ಲಾದೇಶ ಸರ್ಕಾರ ತೀರ್ಮಾನಿಸಿದೆ.

ಅಂದಾಜು 5 ಲಕ್ಷದಷ್ಟು ರೋಹಿಂಗ್ಯಾ ಮುಸ್ಲಿಮರಲ್ಲಿ ಹೆಚ್ಚಿನವರು ಬಾಂಗ್ಲಾದೇಶದ ಆಗ್ನೇಯ ಭಾಗಕ್ಕೆ ಕಳೆದ 5 ವಾರಗಳಲ್ಲಿ ಬಂದಿದ್ದಾರೆ. ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾ ಜನರ ವಿರುದ್ಧ ಹಿಂಸಾಚಾರ ಭುಗಿಲೆದ್ದ ನಂತರ ಇವರು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಜಾಗದಲ್ಲಿ ನೆಲೆ ಕಂಡುಕೊಂಡಿರುವ ಇವರ ಸಂಖ್ಯೆ ದಿಢೀರನೇ ಹೆಚ್ಚಿದೆ. ಇವರೆಲ್ಲ ಬಂದರ್ಬನ್‌ ಜಿಲ್ಲೆಯ ಸಮೀಪ ಹಾಗೂ ಚಿತ್ತಗಾಂಗ್‌ನ ಗುಡ್ಡಗಾಡು ಪ್ರದೇಶಗಳಲ್ಲಿ ನೆಲೆ ನಿಂತಿದ್ದಾರೆ. ರೋಹಿಂಗ್ಯಾ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿರುವುದು ಬಾಂಗ್ಲಾದೇಶದ ಅಧಿಕಾರಿಗಳಿಗೆ ತಲೆನೋವಾಗಿದೆ ಎನ್ನಲಾಗಿದೆ.

ಮ್ಯಾನ್ಮಾರ್‌ನಲ್ಲಿ ಪೌರತ್ವ ನಿರಾಕರಿಸಿದದ ರೋಹಿಂಗ್ಯಾ ಮುಸ್ಲಿಮರಿಗೆ ಬಾಂಗ್ಲಾದೇಶ ತನ್ನ ಗಡಿಯನ್ನು ತೆರೆದಿದೆ. ಆದರೆ ಅಧಿಕೃತ ನಿರಾಶ್ರಿತರ ಸ್ಥಾನಮಾನವನ್ನು ಮಾತ್ರ ಈವರೆಗೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT