ಹಣ, ಖ್ಯಾತಿಯಿಂದ ಮಾತ್ರ ರಾಜಕೀಯದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ: ರಜನಿಕಾಂತ್

ಮಂಗಳವಾರ, ಜೂನ್ 18, 2019
25 °C

ಹಣ, ಖ್ಯಾತಿಯಿಂದ ಮಾತ್ರ ರಾಜಕೀಯದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ: ರಜನಿಕಾಂತ್

Published:
Updated:
ಹಣ, ಖ್ಯಾತಿಯಿಂದ ಮಾತ್ರ ರಾಜಕೀಯದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ: ರಜನಿಕಾಂತ್

ಚೆನ್ನೈ: ಸಿನಿಮಾ ಕ್ಷೇತ್ರದಲ್ಲಿ ಗಳಿಸಿದ ಖ್ಯಾತಿ ಮತ್ತು ಹಣದಿಂದ ಮಾತ್ರವೇ ರಾಜಕೀಯದಲ್ಲಿ ಯಶಸ್ಸು ಗಳಿಸಲು ಸಾಧ್ಯವಿಲ್ಲ. ಇದಕ್ಕಿಂತ ಹೊರತಾದ ಯಾವುದೋ ವಿಶೇಷ ಅಂಶ ಬೇಕಾಗಿದೆ ಎಂದು ತಮಿಳು ನಟ ರಜನಿಕಾಂತ್ ಹೇಳಿದರು.

ತಮಿಳು ನಟ ಶಿವಾಜಿ ಗಣೇಶನ್‌ ಅವರ ಸ್ಮಾರಕ ಉದ್ಘಾಟನಾ ಸಮಾರಂಭದಲ್ಲಿ ನಟ ಕಮಲಹಾಸನ್ ಜತೆ ವೇದಿಕೆ ಹಂಚಿಕೊಂಡ ಅವರು, ‘ಸಾರ್ವಜನಿಕ ಜೀವನದಲ್ಲಿ ಯಶಸ್ಸು ಗಳಿಸಲು ಬೇಕಿರುವ ವಿಶೇಷ ಅಂಶ ಏನೆಂಬುದು ಕಮಲಹಾಸನ್‌ ಅವರಿಗೆ ತಿಳಿದಿರುವ ಸಾಧ್ಯತೆ ಇದೆ. ಆದರೆ, ಅದನ್ನವರು ನನ್ನ ಜತೆ ಹಂಚಿಕೊಳ್ಳಲು ಸಿದ್ಧರಿಲ್ಲ’ ಎಂದು ಹಾಸ್ಯ ಮಾಡಿದರು.

‘ಸಿನಿಮಾ ಕ್ಷೇತ್ರದಲ್ಲಿ ಜನಪ್ರಿಯರಾಗಿದ್ದ ಶಿವಾಜಿ ಗಣೇಶನ್ ಅವರು ತಮ್ಮದೇ ಆದ ಪಕ್ಷ ಸ್ಥಾಪಿಸಿದ್ದರು. ಆದರೆ, ತಮ್ಮದೇ ಕ್ಷೇತ್ರದಲ್ಲಿ ಸೋಲನುಭವಿಸಿದ್ದರು’ ಎಂದು ರಜನಿ ನೆನಪಿಸಿದರು. ಸಮಾರಂಭದಲ್ಲಿ ತಮಿಳುನಾಡಿನ ಉಪಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry