ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಶ್ರಿತ ಕನ್ನಡಿಗರಿಗೆ ಶಾಶ್ವತ ಪುನರ್ವಸತಿ

Last Updated 1 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಕಾರವಾರ (ಉತ್ತರ ಕನ್ನಡ):  ‘ಗೋವಾದಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆಯನ್ನು ಕರ್ನಾಟಕ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ನಿರಾಶ್ರಿತರಿಗೆ ಅಲ್ಲಿಯೇ ಶಾಶ್ವತ ಪುನರ್ವಸತಿ ಕಲ್ಪಿಸಿಕೊಡಲಾಗುವುದು’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ಹೇಳಿದರು.

ಭಾನುವಾರ ಗೋವಾದ ಬೈನಾ ಕಡಲತೀರಕ್ಕೆ ಭೇಟಿ ನೀಡಿದ್ದ ಅವರು, ಅಲ್ಲಿನ ನಿರಾಶ್ರಿತರ ಕನ್ನಡಿಗರ ಸಂಕಷ್ಟವನ್ನು ಆಲಿಸಿ ಸುದ್ದಿಗಾರರ ಜತೆ ಮಾತನಾಡಿದರು.

‘ಕನ್ನಡಿಗರ ಸಮಸ್ಯೆಯನ್ನು ತಿಳಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಇಲ್ಲಿಗೆ ಕಳುಹಿಸಿಕೊಟ್ಟಿದ್ದಾರೆ. ನಿರಾಶ್ರಿತರ ಕನ್ನಡಿಗರು ಎದುರಿಸುತ್ತಿರುವ ಸಂಕಷ್ಟವನ್ನು ಅವಲೋಕಿಸಿದ್ದು, ಮುಖ್ಯಮಂತ್ರಿಗೆ ಸಮಗ್ರ ವರದಿ ನೀಡಲಿದ್ದೇನೆ’ ಎಂದು ಹೇಳಿದರು.

ಕನ್ನಡಿಗರಿಗೆ ಅನ್ಯಾಯ: ‘ಉತ್ತರ ಕರ್ನಾಟಕದ ಅನೇಕ ಮಂದಿ ಸುಮಾರು 40 ವರ್ಷಗಳಿಂದ ಬೈನಾ ಕಡಲತೀರದಲ್ಲಿ ನೆಲೆಸಿ, ಕೂಲಿ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಆದರೆ ಗೋವಾ ಸರ್ಕಾರ 2004ರಿಂದ ಹಂತ ಹಂತವಾಗಿ ಇಲ್ಲಿನ ಕನ್ನಡಿಗರ ಮನೆಗಳನ್ನು ತೆರವುಗೊಳಿಸುವ ಮೂಲಕ ಅನ್ಯಾಯ ಮಾಡಿದೆ. ನಿರಾಶ್ರಿತರಿಗೆ ಪುನವರ್ಸತಿಯನ್ನು ಕಲ್ಪಿಸದೇ ಬೀದಿಗೆ ದೂಡಿದೆ’ ಎಂದು ಚಿಂಚನಸೂರ ಕಿಡಿಕಾರಿದರು.

ಕಣ್ಣೀರಿಟ್ಟ ನಿರಾಶ್ರಿತರು:‘ಸೂರನ್ನು ಕಳೆದುಕೊಂಡು ನಾವೆಲ್ಲ ಬೀದಿಗೆ ಬಿದ್ದಿದ್ದೇವೆ. ಕಳೆದ ಒಂದು ವಾರದಿಂದ ಊಟ. ವಸತಿ ಇಲ್ಲದೇ ಸಂಕಷ್ಟ ಅನುಭವಿಸುತ್ತಿದ್ದೇವೆ. ಪುಟ್ಟ ಮಕ್ಕಳನ್ನು ಕರೆದುಕೊಂಡು ಎಲ್ಲಿಗೆ ಹೋಗಬೇಕು?’ ಎಂದು ಮಹಿಳೆಯೊಬ್ಬರು ಕಣ್ಣೀರಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT