ಬಾಲಕಿ ಮೇಲೆ ಎಸ್‌ಐ ಅತ್ಯಾಚಾರ

ಭಾನುವಾರ, ಜೂನ್ 16, 2019
32 °C

ಬಾಲಕಿ ಮೇಲೆ ಎಸ್‌ಐ ಅತ್ಯಾಚಾರ

Published:
Updated:

ರಾಮ್‌ಪುರ, (ಉತ್ತರ ಪ್ರದೇಶ): ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಒಬ್ಬ ಏಳು ವರ್ಷದ ಬಾಲಕಿಯ ಮೇಲೆ ಶನಿವಾರ ರಾತ್ರಿ ಪೊಲೀಸ್‌ ವಸತಿಗೃಹದಲ್ಲಿಯೇ ಅತ್ಯಾಚಾರ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ರಾಮ್‌ಪುರ ಜಿಲ್ಲೆಯ ಕೆಮ್ರಿ ಪಟ್ಟಣಕ್ಕೆ ಸಮೀಪದ ಭ‌ನ್ವರ್ಕಾ ಎಂಬಲ್ಲಿನ ಪೊಲೀಸ್‌ ವಸತಿಗೃಹದ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು, ಕುಡಿದ ಮತ್ತಿನಲ್ಲಿದ್ದ ಸಬ್‌ ಇನ್‌ಸ್ಪೆಕ್ಟರ್‌ ಒಳಗೆ ಕರೆತಂದು ಅತ್ಯಾಚಾರ ಎಸಗಿದ. ಇದನ್ನು ಗಮನಿಸಿದ ಕಾನ್‌ಸ್ಟೆಬಲ್‌ ಒಬ್ಬರು ಘಟನೆಯ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಿದರು. ಕೆರಳಿದ ಸಾರ್ವಜನಿಕರು ಪೊಲೀಸ್‌ ಠಾಣೆಯ ಮುಂದೆ ಜಮಾಯಿಸಿ ಠಾಣೆಯನ್ನು ಧ್ವಂಸಗೊಳಿಸಲು ಯತ್ನಿಸಿದರು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಪಿನ್‌ ತಾಡಾ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಆರೋಪಿಯನ್ನು ಬಂಧಿಸಲಾಗಿದ್ದು, ಕೆಲಸದಿಂದ ಅಮಾನತು ಮಾಡಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry