ಕಾಂಗ್ರೆಸ್‌ನಲ್ಲಿ ಅಯೋಗ್ಯರಿಗೆ ಜಾಗ ಇಲ್ಲ: ಸಚಿವ ರಮೇಶ್‌ಕುಮಾರ್‌

ಗುರುವಾರ , ಜೂನ್ 20, 2019
27 °C

ಕಾಂಗ್ರೆಸ್‌ನಲ್ಲಿ ಅಯೋಗ್ಯರಿಗೆ ಜಾಗ ಇಲ್ಲ: ಸಚಿವ ರಮೇಶ್‌ಕುಮಾರ್‌

Published:
Updated:
ಕಾಂಗ್ರೆಸ್‌ನಲ್ಲಿ ಅಯೋಗ್ಯರಿಗೆ ಜಾಗ ಇಲ್ಲ: ಸಚಿವ ರಮೇಶ್‌ಕುಮಾರ್‌

ಕೋಲಾರ: ‘ಸಂಸ್ಕೃತಿ ಅರಿವಿಲ್ಲದ ಅಯೋಗ್ಯರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದಿಲ್ಲ, ಜನಪರ ಕಾಳಜಿ ಇರುವವರಿಗೆ ಸದಾ ಬಾಗಿಲು ತೆರೆದಿರುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್.ರಮೇಶ್‌ಕುಮಾರ್ ಹೇಳಿದರು.

ಸ್ಥಳೀಯ ಶಾಸಕ ವರ್ತೂರು ಪ್ರಕಾಶ್‌ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವಿರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ಯೋಗ್ಯರು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಬರಲು ಅರ್ಹರು. ಅಯೋಗ್ಯರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನವಿಲ್ಲ’ ಎಂದರು.

‘ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ದುರಹಂಕಾರದಿಂದ ಮಾತನಾಡುವವರು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವಲ್ಲ. ಅಂತಹವರು ಬಂದರೆ ಕಾಂಗ್ರೆಸ್ ಪಕ್ಷ ಉದ್ಧಾರ ಆಗುವುದಿಲ್ಲ. ಮುಂಬರುವ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ’ ಎಂದು ಸ್ಪಷ್ಟಪಡಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry