₹1.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಗುರುವಾರ , ಜೂನ್ 20, 2019
31 °C

₹1.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Published:
Updated:

ಬೆಂಗಳೂರು: ಮೈಸೂರು ರಸ್ತೆಯ ಗುಡ್ಡದ ಹಳ್ಳಿಯಲ್ಲಿರುವ ಉದ್ಯಮಿ ಧರ್ಮಸಿಂಗ್ ಎಂಬುವರ ಮನೆಯಲ್ಲಿ ಕಳ್ಳತನ ಎಸಗಿರುವ ದುಷ್ಕರ್ಮಿಗಳು, ₹1.5 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾರೆ.

‘ಕೆಲಸ ಪ್ರಯುಕ್ತ ಶನಿವಾರ ಬೆಳಿಗ್ಗೆ ಧರ್ಮಸಿಂಗ್‌ ಕುಂಬಳಗೋಡಿಗೆ ಹೋಗಿದ್ದರು. ಮಕ್ಕಳು ಸೈಬರ್‌ ಕೇಂದ್ರಕ್ಕೆ ಹೋಗಿದ್ದರು. ಈ ವೇಳೆ ಧರ್ಮಸಿಂಗ್‌ ಅವರ ಪತ್ನಿ, ಮನೆಯ ಬೀಗದ ಕೀಯನ್ನು ಕಿಟಕಿಯಲ್ಲಿಟ್ಟು ಅಂಗಡಿಗೆ ಹೋಗಿದ್ದರು. ಅದನ್ನು ಗಮನಿಸಿದ್ದ ದುಷ್ಕರ್ಮಿಗಳು, ಬೀಗದ ಕೀ ಬಳಸಿ ಬಾಗಿಲು ತೆರೆದು ಒಳಗೆ ನುಗ್ಗಿದ್ದಾರೆ.‘

‘ಬೀರುವಿನಲ್ಲಿಟ್ಟಿದ್ದ 190 ಗ್ರಾಂ ತೂಕದ  ಚಿನ್ನದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಪತ್ನಿ ಮನೆಗೆ ಮರಳಿದಾಗ ಕೃತ್ಯ ಬೆಳಕಿಗೆ ಬಂದಿದೆ’ ಎಂದು ಪೊಲೀಸರು ತಿಳಿಸಿದರು.

800 ಗ್ರಾಂ ಚಿನ್ನ ಕಳವು:ಬ್ಯಾಟರಾಯಪುರದ ಮುನೇಶ್ವರ ಬ್ಲಾಕ್‌ನಲ್ಲಿ ವಾಸವಿರುವ ಉದ್ಯಮಿ ಆನಂದ್‌ ಎಂಬುವರ ಮನೆಯ ಬೀಗ ಮುರಿದು ದುಷ್ಕರ್ಮಿ

ಗಳು ಕಳ್ಳತನ ಎಸಗಿದ್ದಾರೆ.

‘800 ಗ್ರಾಂ ಚಿನ್ನ, 2 ಕೆ.ಜಿ ಬೆಳ್ಳಿ ಹಾಗೂ ₹6 ಲಕ್ಷ ನಗದು ಕಳುವಾಗಿರುವುದಾಗಿ ಅಂದಾಜಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry