ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಳಿ ತ್ಯಾಜ್ಯ: ಕಟ್ಟುನಿಟ್ಟಿನ ಕ್ರಮಕ್ಕೆ ಆಗ್ರಹ

Last Updated 2 ಅಕ್ಟೋಬರ್ 2017, 5:30 IST
ಅಕ್ಷರ ಗಾತ್ರ

ಕನಸವಾಡಿ (ದೊಡ್ಡಬಳ್ಳಾಪುರ): ತಾಲ್ಲೂಕಿನ ಕನಸವಾಡಿ, ನೆಲಮಂಗಲ ರಸ್ತೆ, ತುಮಕೂರು ರಸ್ತೆ, ಚಿಕ್ಕಬಳ್ಳಾಪುರ ರಸ್ತೆ ಬದಿಗಳಲ್ಲಿ ಕೋಳಿ ತ್ಯಾಜ್ಯ ಎಲ್ಲೆಂದರಲ್ಲಿ ಬಿಸಾಡಲಾಗುತ್ತಿದೆ. ಇದು ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ.

ಈ ತ್ಯಾಜ್ಯವನ್ನು ತಿನ್ನಲು ನಾಯಿ, ಹದ್ದುಗಳ ಹಾವಳಿ ಮಿತಿಮೀರಿದೆ. ರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ತಿನ್ನಲು ಬರುವ ನಾಯಿಗಳು ಕಾರು, ಬೈಕ್‌ ಸವಾರರಿಗೆ ಅಡ್ಡ ಬಂದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿವೆ ಎಂದು ಕನಸವಾಡಿ ನಿವಾಸಿ ಚೇತನ್‌ ದೂರಿದ್ದಾರೆ.

ಇದಲ್ಲದೆ ರಸ್ತೆಯಲ್ಲಿ ಒಡಾಡಲು ಆಗದಷ್ಟು ದುರ್ವಾಸನೆ ಬರುತ್ತಿದೆ. ಇದರಿಂದ ಮೂಗುಮುಚ್ಚಿಕೊಂಡು ಹೋಗುವಂತಾಗಿದೆ ಎನ್ನುತ್ತಾರೆ ಸಾರ್ವಜನಿಕರು. ನಗರದಲ್ಲಿ ಕೋಳಿ ಅಂಗಡಿಗಳಲ್ಲಿ ಉತ್ಪತ್ತಿಯಾಗಿ ಕೋಳಿ ತ್ಯಾಜ್ಯ ವಿಲೇವಾರಿಗೆ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

ಹೀಗಾಗಿ ರಾತ್ರಿ ವೇಳೆಯಲ್ಲಿ ನಗರದ ಕೋಳಿ ಅಂಗಡಿಗಳವರು ಮೂಟೆಗಳಲ್ಲಿ ತಂದು ರಸ್ತೆ ಬದಿಯ ಕೆರೆ ಅಂಗಳ, ಬೇಲಿ ಪೊದೆಗಳಲ್ಲಿ ಬಿಸಾಡಿ ಹೋಗುತ್ತಾರೆ. ಬೆಳಗಾಗುತ್ತಲೆ ಈ ತ್ಯಾಜ್ಯ ತಿನ್ನಲು ನೂರಾರು ಸಂಖ್ಯೆಯಲ್ಲಿ ಬರುವ ನಾಯಿಗಳ ಹಿಂಡು ರಸ್ತೆಗಳಿಗೆ ನುಗ್ಗುತ್ತವೆ.

ಇದರಿಂದ ವೇಗವಾಗಿ ಬರುವ ಕಾರು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಅಪಘಾತಗಳು ಸಾಮಾನ್ಯವಾಗಿವೆ. ಕೋಳಿ ತ್ಯಾಜ್ಯವನ್ನು ರಾತ್ರಿ ವೇಳೆ ತಂದು ರಸ್ತೆ ಬದಿಯಲ್ಲಿ ಹಾಕುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT