ರಾಜ್ಯದಲ್ಲಿ 2018 ರ ಚುನಾವಣೆ; ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ

ಮಂಗಳವಾರ, ಜೂನ್ 18, 2019
23 °C

ರಾಜ್ಯದಲ್ಲಿ 2018 ರ ಚುನಾವಣೆ; ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ

Published:
Updated:

ಹಿರಿಯೂರು: 2013 ರಲ್ಲಿ ಚುನಾವಣೆ ಪೂರ್ವದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ಈಡೇರಿಸಿದ್ದು, 2018 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಆರ್. ನಾಗೇಂದ್ರನಾಯ್ಕ ಹೇಳಿದರು.

ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಡಿ.ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದ 9 ವರ್ಷದ ಅವಧಿಯಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಶಿಕ್ಷಣ, ಗ್ರಾಮೀಣ ಅಭಿವೃದ್ಧಿಗೆ ₨ 1500 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಬೂತ್ ಮಟ್ಟದ ಕಾರ್ಯಕರ್ತರು ಶ್ರಮ ವಹಿಸಿದ್ದಲ್ಲಿ ಪಕ್ಷವನ್ನು ಸದೃಢವಾಗಿಸಬಹುದು ಎಂದು ತಿಳಿಸಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ತಾಲ್ಲೂಕು ಪಂಚಾಯ್ತಿ ಸದಸ್ಯ ಮುಕುಂದ್, ಗ್ರಾಮ ಪಂಚಾಯ್ತಿ ಸದಸ್ಯ ಎ. ಉಮೇಶ್, ಗುರು ಪ್ರಸಾದ್, ಪಾತಪ್ಪ, ಸುಜಾತ, ಅಬ್ದುಲ್ಲಾ, ತಂಗವೇಲು, ನವೀದ್, ಚನ್ನಪ್ಪ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry