ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಶಾಸಕ ಬಿ.ವೈ. ರಾಘವೇಂದ್ರ

Last Updated 2 ಅಕ್ಟೋಬರ್ 2017, 9:41 IST
ಅಕ್ಷರ ಗಾತ್ರ

ಶಿಕಾರಿಪುರ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಶಾಸಕ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಈಚೆಗೆ ಆರೋಗ್ಯ ಇಲಾಖೆ, ಪುರಸಭೆ, ಉದ್ಭವ್‌ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಋಗ್ವೇದ ಸಂಸ್ಥೆ, ಲಯನ್ಸ್‌ ಕ್ಲಬ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಡೆಂಗಿ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾ ಹಾಗೂ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ನಾಗರಿಕರ ಮೇಲಿದೆ. ನಾವು ದೇಹದ ಆರೋಗ್ಯ ಕಾಪಾಡಿಕೊಂಡಂತೆ ನಮ್ಮ ಸುತ್ತಮುತ್ತಲಿನ ಪರಿಸರದ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಡೆಂಗಿ ರೋಗ ಹರಡದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸಲಹೆಗಳನ್ನು ಸಾರ್ವಜನಿಕರು ಸ್ವೀಕರಿಸಿ ಅನುಸರಿಸಬೇಕು’ ಎಂದು ಸಲಹೆ ನೀಡಿದರು.

ಪುರಸಭೆ ಸದಸ್ಯರಾದ ಸೈಯದ್‌ಪೀರ್‌, ಪಾರಿವಾಳ ಶಿವರಾಮ್‌, ತಾಲ್ಲೂಕು ವೈದ್ಯಾಧಿಕಾರಿ ಮಂಜುನಾಥ್‌ ನಾಗಲೀಕರ್‌, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶ್ರೀನಿವಾಸ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ. ಚಿನ್ನಪ್ಪ, ಉದ್ಭವ್‌ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಚಂದ್ರಕಲಾ, ಆಸ್ಪತ್ರೆ ಸಹಾಯವಾಣಿ ಕೇಂದ್ರದ ಮಂಜುನಾಥ್‌, ಲಯನ್ಸ್‌ ಕ್ಲಬ್‌ ಅಧ್ಯಕ್ಷ ವಸಂತಕುಮಾರ್‌, ಪದಾಧಿಕಾರಿಗಳಾದ ಮೋಹನಸಾನು, ಶಿವಾನಂದಸಾನು ಅವರೂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT