ಭಾನುವಾರ, ಸೆಪ್ಟೆಂಬರ್ 22, 2019
22 °C

‘ಬಿಜೆಪಿಯಿಂದ ಕಾಂಗ್ರೆಸ್ ಮುಕ್ತ, ಕಾಂಗ್ರೆಸ್‌ನಿಂದ ಹಸಿವು ಮುಕ್ತ ’

Published:
Updated:

ಹೆಬ್ರಿ: ‘ಅಪ್ರಚಾರ ಮಾಡುತ್ತಲೇ ಬಿಜೆಪಿ ಕಾಂಗ್ರೆಸ್ ಮುಕ್ತ ಕರ್ನಾಟಕ ಎಂದು ಹೇಳುತ್ತಿದ್ದರೆ, ಕಾಂಗ್ರೆಸ್ ನೇತೃತ್ವದ ಸಿದ್ಧರಾಮಯ್ಯ ಸರ್ಕಾರ ಹಸಿವು ಮುಕ್ತ ಕರ್ನಾಟಕ ಮಾಡುತ್ತ ಜನರ ಮನಸ್ಸಿನಲ್ಲಿ ನೆಲೆಯಾಗಿದ್ದಾರೆ. ಬಿಜೆಪಿಯ ಯಾವ ತಂತ್ರವೂ ಫಲಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್ ಹೇಳಿದರು.

ಅವರು ಹೆಬ್ರಿಯ ಚೈತನ್ಯ ಯುವ ವೃಂದದ ಸಭಾಂಗಣದಲ್ಲಿ ಶನಿವಾರ ನಡೆದ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಕಾರ್ಕಳದಲ್ಲಿ ನಡೆಯುವ ಸಮಾ ವೇಶ ಮುಂದಿನ ವಿಧಾನಸಭಾ ಚುನಾ ವಣೆಯ ದಿಕ್ಸೂಚಿಯಾಗಿ ವಿಜಯಯಾತ್ರೆ ಅಲ್ಲಿಂದ ಆರಂಭವಾಗಬೇಕು’ ಎಂದರು.

ಫೊಟೊ ಇಡಿ: ‘ಎನೂ ಕೆಲಸ ಮಾಡದೇ ವಿದೇಶ ಸುತ್ತಿದ ಪ್ರಧಾನಿ ಮೋದಿ ಫೊಟೋ ಮನೆಮನೆಗೆ ಬಿಜೆಪಿ ಕಾರ್ಯಕರ್ತರು ಮುಟ್ಟಿಸುತ್ತಾರೆಂದರೆ, ಹೇಳಿದ ಎಲ್ಲ ಕೆಲಸ ಮಾಡಿ ಭ್ರಷ್ಟಾಚಾರ ಇಲ್ಲದೆ ಸರ್ಕಾರ ಮುನ್ನಡೆಸಿ ಜನರ ಮನಗೆದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯರ ಫೊಟೊ ಯಾಕೆ ಕೊಡಬಾರದು’ ಎಂದು ಎಂ.ಎಸ್.ಮಹಮ್ಮದ್ ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್. ಗೋಪಾಲ ಭಂಡಾರಿ ಮಾತನಾಡಿ ಅಕ್ಟೋಬರ್ 10 ರಂದು ಕಾರ್ಕಳದಲ್ಲಿ ನಡೆಯುವ ಕ್ಷೇತ್ರ ಮಟ್ಟದ ಕಾಂಗ್ರೆಸ್ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಕೆಪಿಸಿಸಿ ಕಾರ್ಯದರ್ಶಿಯಾಗಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಜಿ.ಎ.ಭಾವಾ, ಜಿಲ್ಲಾ ಕಾಂಗ್ರೆಸ್ ಕಾರ್ಯ ದಶರ್ ಎಚ್.ಶೇಖರ ಮಡಿವಾಳ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕಾರ್ಯದಶರ್ ರಾಘವ ದೇವಾಡಿಗ, ಬ್ಲಾಕ್ ಕಾಂಗ್ರೆಸ್ ಕಾರ್ಯದಶರ್ ನವೀನ ಅಡ್ಯಂತಾಯ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಡಾ.ಸಂತೋಷ ಕುಮಾರ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಲಕ್ಷ್ಮಣ್, ಜನಪ್ರತಿನಿಧಿಗಳು, ಪಕ್ಷದ ವಿವಿಧ ಘಟಕಗಳ ಪ್ರಮುಖರು, ಶೀನಾ ಪೂಜಾರಿ, ಗುಳಿ ಬೆಟ್ಟು ಸುರೇಶ ಶೆಟ್ಟಿ, ಪಂಚಾಯಿತಿ ಅಧ್ಯಕ್ಷ ಮುದ್ರಾಡಿಯ ಶಶಿಕಲಾ ಪೂಜಾರಿ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಕಾರ್ಯದಶರ್ ಸಂತೋಷ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Post Comments (+)