ನೀರು ಹಂಚಿಕೆ: ಅನ್ಯಾಯವಾದರೆ ಹೋರಾಟ–ಎಚ್ಚರಿಕೆ

ಭಾನುವಾರ, ಜೂನ್ 16, 2019
22 °C

ನೀರು ಹಂಚಿಕೆ: ಅನ್ಯಾಯವಾದರೆ ಹೋರಾಟ–ಎಚ್ಚರಿಕೆ

Published:
Updated:
ನೀರು ಹಂಚಿಕೆ: ಅನ್ಯಾಯವಾದರೆ ಹೋರಾಟ–ಎಚ್ಚರಿಕೆ

ಆಲಮಟ್ಟಿ(ನಿಡಗುಂದಿ): ‘ಆಲಮಟ್ಟಿ ಜಲಾಶಯವನ್ನು 524.256 ಮೀ. ಏರಿಕೆ ಮಾಡಿದರೆ ವಿಜಯಪುರ ಜಿಲ್ಲೆಯ ಹೆಚ್ಚಿನ ಜಮೀನುಗಳೇ ಮತ್ತೆ ಮುಳುಗುತ್ತವೆ. ಅದಕ್ಕಾಗಿ ಜಲಾಶಯದಲ್ಲಿ ಸಂಗ್ರಹವಾದ ನೀರಿನಲ್ಲಿ ಮೊದಲ ಆದ್ಯತೆ ವಿಜಯಪುರ, ಬಾಗಲಕೋಟೆ ಜಿಲ್ಲೆಗೆ ನೀಡಬೇಕು. ಜಿಲ್ಲೆಯ ನೀರಾವರಿ ವಿಷಯದಲ್ಲಿ ಅನ್ಯಾಯವಾದರೆ ಸಂಘಟಿತ ಹೋರಾಟ ನಡೆಸಲಾಗುವುದು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಕಲ್ಲು ಸೊನ್ನದ ಹಾಗೂ ಬಸವನಬಾಗೇವಾಡಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಎಚ್ಚರಿಸಿದರು.

ಆಲಮಟ್ಟಿಯಲ್ಲಿ ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರ ಜೊತೆಗೂಡಿ ತುಂಬಿದ ಕೃಷ್ಣೆಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

‘ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗಿದೆ.

ಕೃಷ್ಣೆಗೂ ಮುಂಬರುವ ದಿನಗಳಲ್ಲಿ ಕಾನೂನಾತ್ಮಕವಾಗಿ ಯಾವುದೇ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಈಗಲೇ ಎಚ್ಚರಿಕೆಯ ಹೆಜ್ಜೆ ಇಡಬೇಕು. ಕೃಷ್ಣೆ ಹಾಗೂ ಇಲ್ಲಿನ ರೈತರಿಗೆ ಅನ್ಯಾಯವಾದರೆ ಕರ್ನಾಟಕ ರಕ್ಷಣಾ ವೇದಿಕೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದರು.

ಎಸ್‌.ಎಸ್. ಅರಮನಿ, ಮಂಜುನಾಥ ಹಿರೇಮಠ ಮಾತನಾಡಿ ದರು. ಇದಕ್ಕೂ ಮೊದಲು ಇಲ್ಲಿಯ ರಾಮಲಿಂಗೇಶ್ವರ ದೇವಸ್ಥಾನದ ಆವರಣದಿಂದ ಕನ್ನಡ ಮಾತೆಗೆ ಹಾಗೂ ಕೃಷ್ಣೆಗೆ ಜಯಘೋಷ ಹಾಕುತ್ತಾ ನೂರಾರು ಕರವೇ ಕಾರ್ಯಕರ್ತರು ಮೆರವಣಿಗೆಯ ಮೂಲಕ ಚಂದ್ರಮ್ಮ ದೇವಸ್ಥಾನದ ಬಳಿ ಕೃಷ್ಣಾ ನದಿಗೆ ತೆರಳಿ, ಅಲ್ಲಿ ಬಾಗಿನ ಅರ್ಪಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry