ಗಾಂಧಿ ಜಯಂತಿ: ಮದ್ಯದ ಅಮಲಿನಲ್ಲಿ ಶಿಕ್ಷಕ

ಗುರುವಾರ , ಜೂನ್ 20, 2019
24 °C

ಗಾಂಧಿ ಜಯಂತಿ: ಮದ್ಯದ ಅಮಲಿನಲ್ಲಿ ಶಿಕ್ಷಕ

Published:
Updated:
ಗಾಂಧಿ ಜಯಂತಿ: ಮದ್ಯದ ಅಮಲಿನಲ್ಲಿ ಶಿಕ್ಷಕ

ಪಾವಗಡ: ತಾಲ್ಲೂಕಿನ ಭೂಪೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರೊಬ್ಬರು ಗಾಂಧಿ ಜಯಂತಿಯಂದು ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಓಡಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಭೂಪೂರು ಶಾಲೆಗೆ ಈಚೆಗೆ ನಿಯೋಜನೆಗೊಂಡಿರುವ ಶಿಕ್ಷಕ ರಾಮಾಂಜಿನಪ್ಪ ಸೋಮವಾರ ಬೆಳ್ಳಂಬೆಳಿಗ್ಗೆ ಪಟ್ಟಣದ ಬಸ್ ನಿಲ್ದಾಣದ ಬಳಿ ಮದ್ಯಪಾನ ಮಾಡಿ ಬಿದ್ದು, ಹೊರಳಾಡುತ್ತಿರುವುದನ್ನು ಕಂಡ ಕೆಲವರು, ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಜಾಲ ತಾಣಗಳಲ್ಲಿ ವೈರಲ್ ಆಗಿದೆ.

ಇವರು ಶಾಲೆಗೂ ಮದ್ಯಪಾನ ಮಾಡಿ ಹೋಗುತ್ತಾರೆ ಎಂದು ಕೆಲವರು ಆರೋಪಿಸಿದ್ದಾರೆ. ಮಕ್ಕಳಿಗೆ ಪಾಠ ಹೇಳಿಕೊಡುವ ಶಿಕ್ಷಕ ಗಾಂಧಿ ಜಯಂತಿಯಂದು ಮದ್ಯ ಸೇವಿಸಿ ಕಿರಿ ಕಿರಿ ಮಾಡಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry