ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಿಸಿ ಉಪ ಜಾತಿಗಳ ವರ್ಗೀಕರಣ: ಸಮಿತಿ ರಚನೆ

Last Updated 2 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಇತರೆ ಹಿಂದುಳಿದ ವರ್ಗಗಳಲ್ಲಿನ (ಒಬಿಸಿ) ‌ಒಳ ವರ್ಗೀಕರಣದ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ದೆಹಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಿ ರೋಹಿಣಿ ನೇತೃತ್ವದಲ್ಲಿ ಐವರು ಸದಸ್ಯರ ಆಯೋಗವನ್ನು ರಚಿಸಿದ್ದಾರೆ.

ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯುವುದಕ್ಕಿಂತಲೂ ಮೊದಲು ಹಾಗೂ ಮ‌‌ಹಾರಾಷ್ಟ್ರದಲ್ಲಿ ಮರಾಠರಿಗೆ, ಹರಿಯಾಣದಲ್ಲಿ ಜಾಟರಿಗೆ ಮತ್ತು ಗುಜರಾತಿನಲ್ಲಿ ಪಟೇಲರಿಗೆ ಮೀಸಲಾತಿ ನೀಡಬೇಕು ಎಂಬ ಕೂಗು ಕೇಳಿಬರುತ್ತಿರುವುದರ ನಡುವೆಯೇ ಈ ನಿರ್ಧಾರ ಹೊರಬಿದ್ದಿದೆ.

‘ಅಧ್ಯಕ್ಷರು ಅಧಿಕಾರ ಸ್ವೀಕರಿಸಿದ 12 ವಾರಗಳ ಒಳಗಾಗಿ ಆಯೋಗವು ರಾಷ್ಟ್ರಪತಿಯವರಿಗೆ ವರದಿ ಸಲ್ಲಿಸಬೇಕಾಗುತ್ತದೆ’ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT