ಸೋಮವಾರ, ಸೆಪ್ಟೆಂಬರ್ 16, 2019
21 °C

ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಭಾರಿ ಮಳೆ

Published:
Updated:
ಶಿವಮೊಗ್ಗ  ಜಿಲ್ಲೆಯ ಕೆಲವೆಡೆ ಭಾರಿ ಮಳೆ

ಶಿವಮೊಗ್ಗ: ಜಿಲ್ಲೆಯ ಕೆಲವೆಡೆ ಸೋಮವಾರ ಸಂಜೆ ಗುಡುಗು ಸಹಿತ ಭಾರಿ ಮಳೆ ಸುರಿಯಿತು. ಶಿವಮೊಗ್ಗ ನಗರದಲ್ಲಿ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿದ್ದವು.

ತೀರ್ಥಹಳ್ಳಿ, ಹೊಸನಗರ ತಾಲ್ಲೂಕಿನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಸಾಗರದಲ್ಲಿ ಮೋಡಕವಿದ ವಾತಾವರಣ ಇತ್ತು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲೂ ಸಂಜೆ 20 ನಿಮಿಷಗಳ ಕಾಲ ಮಳೆಯಾಗಿದೆ.

ಎಮ್ಮೆಗಳ ಸಾವು: ಭಾನುವಾರ ರಾತ್ರಿ ಸಿಡಿಲು ಬಡಿದ ಪರಿಣಾಮ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮಲಹಾಳ್ ಗ್ರಾಮದಲ್ಲಿ ಒಂದು ಎಮ್ಮೆ, ರಾಜಗೊಂಡನಹಳ್ಳಿಯಲ್ಲಿ ಎರಡು ಎಮ್ಮೆಗಳು ಮೃತಪಟ್ಟಿವೆ.

Post Comments (+)