ಶುಕ್ರವಾರ, ಸೆಪ್ಟೆಂಬರ್ 20, 2019
25 °C

₹1.30 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

Published:
Updated:

ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ₹1.30 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆಗಳ ಅಭಿವೃದ್ಧಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಬಾಬು ಜಗಜೀವನರಾಂ ಸಮುದಾಯ ಭವನಗಳ ನಿರ್ಮಾಣದ ಕಾಮಗಾರಿಗೆ ಕೃಷಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಕಾವೇರಿ ಕೊಳವೆಮಾರ್ಗ ಅಳವಡಿಕೆ ಹಾಗೂ ಒಳಚರಂಡಿ ಕಾಮಗಾರಿ ಕೈಗೊಂಡಿದ್ದರಿಂದ ಈ ಬಡಾವಣೆಯ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದವು. ₹90 ಲಕ್ಷ ವೆಚ್ಚದಲ್ಲಿ ರಸ್ತೆಗಳ ಮರುನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

‘ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಮೊದಲ ಹಂತದಲ್ಲಿ ₹40 ಲಕ್ಷ ಮಂಜೂರು ಮಾಡಲಾಗಿದೆ. ಮತ್ತೆ ₹25 ಲಕ್ಷ ಅನುದಾನ ಮಂಜೂರು ಮಾಡಿಸಲು ಪ್ರಯತ್ನಿಸುತ್ತೇನೆ’ ಎಂದರು.

Post Comments (+)