ನಕಾರಾತ್ಮಕ ಪರಿಣಾಮ: ಕ್ಷಮೆ ಕೇಳಿದ ಜುಕರ್‌ಬರ್ಗ್‌

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ನಕಾರಾತ್ಮಕ ಪರಿಣಾಮ: ಕ್ಷಮೆ ಕೇಳಿದ ಜುಕರ್‌ಬರ್ಗ್‌

Published:
Updated:
ನಕಾರಾತ್ಮಕ ಪರಿಣಾಮ: ಕ್ಷಮೆ ಕೇಳಿದ ಜುಕರ್‌ಬರ್ಗ್‌

ವಾಷಿಂಗ್ಟನ್‌: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ನಕಾರಾತ್ಮಕ ಪರಿಣಾಮಗಳ ಬಗ್ಗೆ ಸಂಸ್ಥೆಯ ಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

ತಾವು ಸೃಷ್ಟಿಸಿದ ಈ ಸಂವಹನ ವೇದಿಕೆಯನ್ನು ಜನರಲ್ಲಿ ಒಗ್ಗಟ್ಟು ಮೂಡಿಸುವ ಬದಲಿಗೆ ಅವರಲ್ಲಿ ಒಡಕು ತರಲು ಕೆಲವರು ಬಳಸಿಕೊಂಡಿದ್ದಕ್ಕೆ ತಮ್ಮನ್ನು ಕ್ಷಮಿಸಬೇಕು ಎಂದೂ ಅವರು ಕೇಳಿಕೊಂಡಿದ್ದಾರೆ.

ತಮ್ಮ ಈ ಕ್ಷಮಾಪನೆ ಕೋರಿಕೆಗೆ ಅವರು ಯಾವುದೇ ಘಟನೆಯನ್ನು ಉಲ್ಲೇಖಿಸಿಲ್ಲ. ಅಮೆರಿಕದ ಅಧ್ಯಕ್ಷ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್ ಪರ ಮತದಾರರ ಮೇಲೆ ಪ್ರಭಾವ ಬೀರಲು ರಷ್ಯನ್ನರು ಫೇಸ್‌ಬುಕ್‌ ಬಳಸಿಕೊಂಡಿದಕ್ಕೆ ಜುಕರ್‌ಬರ್ಗ್‌ ಅವರು ಈ ಕ್ಷಮಾಪನೆ ಕೇಳಿದ್ದಾರೆ ಎಂದು ‘ವಾಷಿಂಗ್ಟನ್‌ ಪೋಸ್ಟ್‌’ ಪತ್ರಿಕೆ ಅಭಿಪ್ರಾಯಪಟ್ಟಿದೆ.

‘ಈ ವರ್ಷ ನಿಮ್ಮನ್ನು ನೋಯಿಸಿದ್ದಕ್ಕೆ ನನ್ನನ್ನು ಕ್ಷಮಿಸಿ’ ಎಂದು ಜುಕರ್‌ಬರ್ಗ್‌ ಅವರು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಫೇಸ್‌ಬುಕ್‌ ವೇದಿಕೆಯನ್ನು ಯಾರೇ ಆಗಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಬಳಸುವುದನ್ನು ನಾನು ಇಷ್ಟಪಡಲಾರೆ’ ಎಂದೂ ಅವರು ಹೇಳಿಕೊಂಡಿದ್ದಾರೆ.

‘ಟ್ರಂಪ್‌ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ರಾಜಕೀಯ ಜಾಹೀರಾತುಗಳನ್ನು ಯಾರು ಖರೀದಿಸಿದ್ದರು ಎನ್ನುವುದರ ಕುರಿತು ತನಿಖೆ ಮುಂದುವರೆಸಲಾಗುವುದು. ಇಂತಹ ವಹಿವಾಟಿನಲ್ಲಿ ಹೆಚ್ಚಿನ ಪಾರದರ್ಶಕತೆಗೆ ಒತ್ತು ನೀಡಲಾಗುವುದು’ ಎಂದು ಹೇಳಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry