ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೆರೋಲ್‌ಗೆ ಶಶಿಕಲಾ ಅರ್ಜಿ ಸಲ್ಲಿಸಿಲ್ಲ’

Last Updated 2 ಅಕ್ಟೋಬರ್ 2017, 19:37 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ವಿ.ನಟರಾಜನ್ ಅವರು ಪೆರೋಲ್ ಕೋರಿ ಅರ್ಜಿ ಸಲ್ಲಿಸಿಲ್ಲ ಎಂದು ಕಾರಾಗೃಹ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

‘ಪೆರೋಲ್ ಕೋರಿ ಶಶಿಕಲಾ ಮನವಿ ಸಲ್ಲಿಸಿದರೂ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ತನಿಖಾ ಹಂತದಲ್ಲಿರುವುದರಿಂದ ಪೆರೋಲ್ ನೀಡಲು ಬರುವುದಿಲ್ಲ. ಪತಿಯ ಅನಾರೋಗ್ಯದ ಕಾರಣ ನೀಡಿ ಮನವಿ ಮಾಡಿದರೆ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳ
ಬೇಕಾಗುತ್ತದೆ’ ಎಂದು ಕಾರಾಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT