ಕಾಂಗ್ರೆಸ್‌ ತೊರೆಯುವುದಿಲ್ಲ: ರಾಜಣ್ಣ

ಭಾನುವಾರ, ಜೂನ್ 16, 2019
22 °C

ಕಾಂಗ್ರೆಸ್‌ ತೊರೆಯುವುದಿಲ್ಲ: ರಾಜಣ್ಣ

Published:
Updated:

ತುಮಕೂರು: ‘ನಾನು ಬೇರೆ ಪಕ್ಷಕ್ಕೆ ಸೇರುತ್ತೇನೆ ಎಂಬುದೆಲ್ಲ ಸುಳ್ಳು. ನಾನು ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ. ಮುಂದಿನ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ’ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದರು.

'ಅಭಿಪ್ರಾಯ ಭೇದ, ಸಂಘರ್ಷ ಏನೇ ಇದ್ದರೂ ಈ ಪಕ್ಷದಲ್ಲಿದ್ದುಕೊಂಡೇ ಬಗೆಹರಿಸಿಕೊಳ್ಳುತ್ತೇನೆ. ಅದಕ್ಕಾಗಿ ಬೇರೆ ಪಕ್ಷಕ್ಕೆ ಹೋಗುವ ಕೆಲಸ ಮಾಡಲ್ಲ. ಕಾಂಗ್ರೆಸ್ ಪಕ್ಷ ಮತ್ತು ನನ್ನ ಸಂಬಂಧ ಒಂದು ರೀತಿ ಗಂಡ ಹೆಂಡತಿಯ ಸಂಬಂಧ ಇದ್ದ ಹಾಗೆ’ ಎಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ

ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಯಾವುದೇ ಅಧಿಕಾರ ಲಭಿಸಬೇಕಾ

ದರೆ ಯೋಗ ಮತ್ತು ಯೋಗ್ಯತೆ ಎರಡೂ ಇರಬೇಕಾಗುತ್ತದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಗಬಲ್ಲಂತಹ ಸಾಮರ್ಥ್ಯವುಳ್ಳ ಅನೇಕರಿದ್ದರು. ಆದರೆ, ಯೋಗ ಮತ್ತು ಯೋಗ್ಯತೆ ಎರಡೂ ಸಿದ್ದರಾಮಯ್ಯ ಅವರಿಗೆ ಇದ್ದುದರಿಂದ ಅವರಿಗೆ ಆ ಸ್ಥಾನ ಸಿಕ್ಕಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry