ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಧೀಜಿ ತತ್ವಗಳಿಗೆ ವಿರುದ್ಧವಾಗಿ ನಡೆಯುತ್ತಿರುವ ಬಿಜೆಪಿ: ಪರಮೇಶ್ವರ

Last Updated 2 ಅಕ್ಟೋಬರ್ 2017, 20:16 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಜನರನ್ನು ಒಡೆದು ಆಳುತ್ತಿರುವ ಬಿಜೆಪಿಯವರು ಮಹಾತ್ಮಾಗಾಂಧೀಜಿಯವರ ತತ್ವಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಆರೋಪಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದ ಎಲ್ಲ ಜನರೂ ಒಟ್ಟಿಗೆ ಇರಬೇಕು ಎಂಬುದು ಗಾಂಧೀಜಿ ಕನಸಾಗಿತ್ತು. ಆದರೆ, ಬಿಜೆಪಿಯವರು ನಾವೇ ಬೇರೆ, ನೀವೇ ಬೇರೆ ಎಂದು ದೇಶ
ದೊಳಗೇ ಜನರನ್ನು ಇಬ್ಭಾಗ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ’ ಎಂದು ಟೀಕಿಸಿದರು.

ಸುಮಾರು 18 ತಿಂಗಳಷ್ಟೇ ಪ್ರಧಾನಿಯಾಗಿದ್ದ ಶಾಸ್ತ್ರಿಯವರು ಹಸಿರು ಕ್ರಾಂತಿ, ಕ್ಷೀರ ಕ್ರಾಂತಿಗೆ ಅಡಿಪಾಯ ಹಾಕಿದರು. 60 ವರ್ಷದಲ್ಲಿ ದೇಶಕ್ಕೆ ಕಾಂಗ್ರೆಸ್
ಏನು ಕೊಟ್ಟಿದೆ ಎಂದು ಬಿಜೆಪಿಯವರು ಪ್ರಶ್ನಿಸುತ್ತಾರೆ. ಗಾಂಧಿ, ಶಾಸ್ತ್ರಿ, ನೆಹರೂ, ಅಂಬೇಡ್ಕರ್, ಇಂದಿರಾಗಾಂಧಿ ಅಂತಹ
ವರನ್ನು ಕೊಟ್ಟಿದ್ದೇ ಕಾಂಗ್ರೆಸ್ ಎಂದು ಅವರಿಗೆ ನೆನಪಿಸಿದರೆ ಸಾಕು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್, ‘ಗ್ರಾಮ ಸ್ವರಾಜ್ಯದ ಕಲ್ಪನೆ ಕೊಟ್ಟವರು ಗಾಂಧಿ. ಆದರೀಗ ಪ್ರತಿ ಒಂದು ನಿಮಿಷಕ್ಕೆ ಹದಿನೇಳು ಜನ ಗ್ರಾಮಗಳನ್ನು ಬಿಟ್ಟು ಪಟ್ಟಣಗಳಿಗೆ ವಲಸೆ ಬರುತ್ತಿದ್ದಾರೆ. ದೇಶದಲ್ಲಿ ಒಂದು ವರ್ಷಕ್ಕೆ ಕನಿಷ್ಠ ಒಂದು ಕೋಟಿ ಉದ್ಯೋಗ ಸೃಷ್ಟಿಯಾಗಬೇಕು. ಆದರೆ, ಏಳರಿಂದ ಎಂಟು ಲಕ್ಷ ಉದ್ಯೋಗಗಳು ಮಾತ್ರ ಸೃಷ್ಟಿಯಾಗುತ್ತಿವೆ’ ಎಂದು ಆತಂಕ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT