ಮಹಾತ್ಮರ ಸ್ಮರಣೆಗೆ ಸ್ವಚ್ಛತಾ ಅಭಿಯಾನ

ಮಂಗಳವಾರ, ಜೂನ್ 18, 2019
24 °C
ವಿವಿಧೆಡೆ ಮಹಾತ್ಮ ಗಾಂಧಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ ಸಡಗರ

ಮಹಾತ್ಮರ ಸ್ಮರಣೆಗೆ ಸ್ವಚ್ಛತಾ ಅಭಿಯಾನ

Published:
Updated:
ಮಹಾತ್ಮರ ಸ್ಮರಣೆಗೆ ಸ್ವಚ್ಛತಾ ಅಭಿಯಾನ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನವನ್ನು ನಗರದಲ್ಲಿ ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.

ಮಹಾತ್ಮರ ಜಯಂತಿ ಅಂಗವಾಗಿ ನಗರದ ವಿವಿಧ ಸ್ಥಳಗಳಲ್ಲಿ ಸಂಘಸಂಸ್ಥೆಗಳು ಸ್ವಚ್ಛತಾ ಅಭಿಯಾನ ನಡೆಸಿದವು.

ಬಿಟಿಎಂ ವಿಧಾನಸಭಾ ಕ್ಷೇತ್ರದ ಈಜೀಪುರ ಬಡಾವಣೆಯ ಇಂದಿರಾ ಗಾಂಧಿ ಕೊಳೆಗೇರಿ ಮತ್ತು ಜಯನಗರ 4ನೇ ಟಿ ಬ್ಲಾಕ್‍ನ 18ನೇ ಮುಖ್ಯ ರಸ್ತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಭಾಗವಹಿಸಿದ್ದರು. ನಂತರ ಬಡ ಮಕ್ಕಳಿಗೆ ಪುಸ್ತಕ ಹಾಗೂ ಬಡ ಕುಟುಂಬಗಳಿಗೆ ಅಕ್ಕಿ ವಿತರಿಸಿದರು.ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯ ಹಾಗೂ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪೌರ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಮೆಟ್ರೊ ನಿಲ್ದಾಣ–ಸ್ವಚ್ಛತಾ ಅಭಿಯಾನ: ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಮತ್ತು ಇಸ್ಕಾನ್‌ ಸಹಯೋಗದಲ್ಲಿ ನಗರದ 21 ಮೆಟ್ರೊ ನಿಲ್ದಾಣಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. 1,000ಕ್ಕೂ ಹೆಚ್ಚು ಸ್ವಯಂಸೇವಕರು ಅಭಿಯಾನದಲ್ಲಿ ಪಾಲ್ಗೊಂಡರು. ಅಂದಗೆಟ್ಟಿದ್ದ 21 ಮೆಟ್ರೊ ನಿಲ್ದಾಣಗಳ ಸಮೀಪದ ಕಾಂಪೌಂಡ್‌ಗಳಿಗೆ ಬಣ್ಣ ಬಳಿದು ಹೊಸ ರೂಪ ನೀಡಿದರು.

ಪಾಲಿಕೆಯಲ್ಲಿ ಆಚರಣೆ: ಬಿಬಿಎಂಪಿ ಮೇಯರ್‌ ಆರ್‌.ಸಂಪತ್‌ರಾಜ್‌ ಮತ್ತು ಉಪ ಮೇಯರ್‌ ಪದ್ಮಾವತಿ ನರಸಿಂಹ ಮೂರ್ತಿ ಅವರು ಗಾಂಧಿ ವೃತ್ತ ಮತ್ತು ಎಂ.ಜಿ. ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು.

ಗಾಂಧೀಜಿ ವಿಚಾರಧಾರೆ ಪ್ರಸ್ತುತ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಾ.ಪಿ.ಎಸ್.ಹರ್ಷ ಅಭಿಪ್ರಾಯಪಟ್ಟರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry