9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತಿ: ಇದೇ 8 ರಂದು

ಬುಧವಾರ, ಜೂನ್ 26, 2019
29 °C
ವಿಶ್ವಕರ್ಮ ಪ್ರಶಸ್ತಿ: ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ, ಚಿತ್ರ ನಟ ವಿ.ರವಿಚಂದ್ರನ್‌ ಆಯ್ಕೆ

9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತಿ: ಇದೇ 8 ರಂದು

Published:
Updated:

ಬಾಗಲಕೋಟೆ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಕೆ.ಪಿ.ನಂಜುಡಿ ನೇತೃತ್ವದಲ್ಲಿ 9ನೇ ರಾಜ್ಯ ಮಟ್ಟದ ವಿಶ್ವಕರ್ಮ ಜಯಂತ್ಯುತ್ಸವವನ್ನು ಇದೇ 8 ರಂದು ಬೆಂಗಳೂರಿನ ಅರಮನೆ ಮೈದಾನದ ಗೇಟ್–ನಂ.1ರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಮೌನೇಶ ಪತ್ತಾರ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಐದು ಮಂದಿ ಸಾಧಕರಿಗೆ ವಿಶ್ವಕರ್ಮ ಪ್ರಶಸ್ತಿ ನೀಡಲಾಗುತ್ತದೆ. ಈ ಬಾರಿ ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಗುರೂಜಿ ಹಾಗೂ ಚಿತ್ರ ನಟ ವಿ.ರವಿಚಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಮೂರು ಜನ ವಿಶ್ವಕರ್ಮ ಸಮಾಜದ ಸಾಧಕರಾಗಿರುತ್ತಾರೆ. ಪ್ರಶಸ್ತಿಯು ಚಿನ್ನದ ಪದಕವನ್ನು ಒಳಗೊಂಡಿರಲಿದೆ ಎಂದು ತಿಳಿಸಿದರು.

ಅಂದಿನ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ ಜನರು ಸೇರಲಿದ್ದಾರೆ. ಜಿಲ್ಲೆಯಿಂದ 30 ಸಾವಿರ ಜನ ಭಾಗವಹಿಸಲಿದ್ದು, ಬಾಗಲಕೋಟೆ ತಾಲ್ಲೂಕಿನಿಂದಲೇ 5 ಸಾವಿರ ಜನ ತೆರಳಲಿದ್ದಾರೆ. ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಮಾಜದ ಬೇಡಿಕೆ ಈಡೇರಿಕೆಗಾಗಿ ಮನವಿ ಸಲ್ಲಿಸಲಾಗುವುದು ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry