ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರದ ಬಿಎಸ್‌ಎಫ್‌ ಶಿಬಿರದ ಮೇಲೆ ಉಗ್ರರ ಆತ್ಮಹತ್ಯೆ ದಾಳಿ; ಮೂವರು ಯೋಧರಿಗೆ ಗಾಯ, ಮೂವರು ಉಗ್ರರ ಹತ್ಯೆ

Last Updated 3 ಅಕ್ಟೋಬರ್ 2017, 10:22 IST
ಅಕ್ಷರ ಗಾತ್ರ

ಶ್ರೀನಗರ: ಕಾಶ್ಮೀರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ, ಬಡ್‌ಗಾಂವ್ ಜಿಲ್ಲೆಯ ಹುಮ್‌ಹಮ ಪ್ರದೇಶದಲ್ಲಿ ಗಡಿ ಭದ್ರತಾ ಪಡೆಯ ಶಿಬಿರದ ಮಲೆ ಉಗ್ರಗಾಮಿಗಳು ಮಂಗಳವಾರ ನಸುಕಿನಲ್ಲಿ ನಡೆಸಿದ ಆತ್ಮಹತ್ಯಾ ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಒಬ್ಬರು ಸಹಾಯಕ ಸಬ್ಇನ್‌ಸ್ಪೆಕ್ಟರ್ ಮೃತಪಟ್ಟಿದ್ದಾರೆ. ಭದ್ರತಾ ಪಡೆಗಳ ಗುಂಡೇಟಿಗೆ ಮೂವರು ಉಗ್ರಗಾಮಿಗಳು ಬಲಿಯಾಗಿದ್ದಾರೆ.

ಉಗ್ರಗಾಮಿಗಳು ಬೆಳಗಿನ ಜಾವ 4.30ರ ವೇಳೆಗೆ ಗಡಿ ಭದ್ರತಾ ಪಡೆಯ 182ನೇ ಬೆಟಾಲಿಯನ್‌ನ ಮೂಲ ಶಿಬಿರದ ಮೇಳೆ ದಾಳಿ ಮಾಡಿದ್ದಾರೆ. ಶಿಬಿರದ ಆಡಳಿತ ಕಚೇರಿ ಇರುವ ಬ್ಲಾಕ್‌ಗೆ ನುಗ್ಗಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆ ಸೇನಾ ಪಡೆ ಪ್ರತಿ ದಾಳಿ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. 

ಉಗ್ರರ ವಿರುದ್ಧದ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಕೊನೆಯಲ್ಲಿ ಒಬ್ಬ ಉಗ್ರನ್ನು ಹತ್ಯೆ ಮಾಡಲಾಯಿತು. ಆರಂಭದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಒಟ್ಟು ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿಪಿ ಮುನೀರ್‌ ಖಾನ್‌ ತಿಳಿಸಿದ್ದಾರೆ.

ಸಿಆರ್‌ಪಿಎಫ್‌ ಮತ್ತು ಬಿಎಸ್‌ಎಫ್‌ನ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಉಳಿದ ಉಗ್ರರಿಗಾಗಿ ಶೋಧ ಮುಂದುವರಿದಿದೆ. ಪ್ರತಿದಾಳಿ ವೇಳೆ ಒಬ್ಬ ಸಹಾಯಕ ಸಬ್‌ಇನ್‌ಸ್ಪೆಕ್ಟರ್‌ ಮೃತಪಟ್ಟಿದ್ದಾರೆ ಎಂದು ಅವರು ವಿವರ ನೀಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT