ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜದಲ್ಲಿ ನೆಮ್ಮದಿ ಬದುಕಿಗೆ ಕಾಂಗ್ರೆಸ್ ಗೆಲುವು ಅನಿವಾರ್ಯ

ಮಡಬೂರು: ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ
Last Updated 3 ಅಕ್ಟೋಬರ್ 2017, 7:10 IST
ಅಕ್ಷರ ಗಾತ್ರ

ಎನ್.ಆರ್.ಪುರ: ಸಮಾಜದಲ್ಲಿ ಪ್ರತಿಯೊಂದು ಜನಾಂಗದವರು ಶಾಂತಿ, ಸೌಹಾರ್ದತೆಯಿಂದ ಬದುಕಲು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದು ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ತಾಲ್ಲೂಕಿನ ಮಡಬೂರು ಗ್ರಾಮದಲ್ಲಿ ಸೋಮವಾರ ತಾಲ್ಲೂಕು ಕಾಂಗ್ರೆಸ್ ಘಟಕದ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧೀಜಿ ಅವರ ಚಿಂತನೆಯಾದ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಎಂಬ ತತ್ವವನ್ನು ಕಾಂಗ್ರೆಸ್ ಪಾಲಿಸಿಕೊಂಡು ಬಂದಿದೆ. ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯ ಮೆರೆಗೆ ರಾಜ್ಯದಲ್ಲಿ ಆಡಳಿತ ರೂಢ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾಮಾನ್ಯ ಜನರಿಗೆ ಒಳಿತಾಗುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮವನ್ನು ಜನರ ಮನೆ ಬಾಗಿಲಿಗೆ ಹೋಗಿ ಅರಿವು ಮೂಡಿಸುವ ಕಾರ್ಯವನ್ನು ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೂಲಕ ಮಾಡಲಾಗುತ್ತಿದೆ ಎಂದರು.

ಪಕ್ಷದ ಪ್ರಣಾಳಿಕೆಯಲ್ಲಿ ಇಲ್ಲದಿದ್ದರೂ ರೈತರ ಸಾಲಮನ್ನಾ ಮಾಡಿ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗಿದೆ. ಬಿಜೆಪಿಯವರು ಕೇಂದ್ರದ ಮೇಲೆ ಒತ್ತಡ ತಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರಸಾಲ ಮನ್ನಾ ಮಾಡಿಸುವ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಉದ್ದಿಮೆದಾರರ ಪರವಾಗಿದ್ದು, ಅವರ ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡುತ್ತದೆ. ರೈತರ ಸಾಲ ಮನ್ನಾ ಮಾಡದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಹೋಬಳಿ ಘಟಕದ ಅಧ್ಯಕ್ಷ ಈ.ಸಿ.ಸೇವಿಯಾರ್ ಮಾತನಾಡಿ, ‘ಕಾಂಗ್ರೆಸ್ ಉತ್ತಮ ಸಮಾಜಕ್ಕಾಗಿ ಯುವಜನರನ್ನು ತನ್ನತ್ತ ಆಕರ್ಷಿಸುವ ಮೂಲಕ ಪಕ್ಷವನ್ನು ಬಲಪಡಿಸಬೇಕಾಗಿದೆ. ಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾದರೂ ಪಕ್ಷದ ಗೆಲುವಿಗಾಗಿ ಶ್ರಮಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಸ್.ಸುಬ್ರಹ್ಮಣ್ಯ ಮಾತನಾಡಿ, ಕಾರ್ಯಕರ್ತರು ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಹಾಗೂ ಕೇಂದ್ರದ ಬಿಜೆಪಿ ವೈಫಲ್ಯದ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷೆ ವನಮಾಲಮ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾಂಗ್ರೆಸ್ ನೂರಾರು ವರ್ಷ ಇತಿಹಾಸವಿರುವ ಪಕ್ಷವಾಗಿದ್ದು ಇದನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲರೂ ಪ್ರಯತ್ನಿಸಬೇಕೆಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಲಲಿತಾ ನಾಗರಾಜ್, ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೈಯದ್ ಸಫೀರ್ ಅಹಮ್ಮದ್, ಯುವ ಕಾಂಗ್ರೆಸ್ ಘಟಕದ ಮೇಘರಾಜ್, ಸುನೀಲ್, ಮುಖಂಡರಾದ ಬೆನ್ನಿ, ಉಪೇಂದ್ರ, ಅಬ್ದುಲ್ಲಾ ಖಾನ್, ಎಲ್ದೋ, ಯೋಗೇಶ್ವ ರಾವ್, ಪ್ರಸನ್ನ ಪಾಲ್ಗೊಂಡಿದ್ದರು.

***
ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ ಕ್ಷೇತ್ರ ಹಾಗೂ ರಾಜ್ಯದಲ್ಲಿ ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು
ಡಾ.ಕೆ.ಪಿ.ಅಂಶುಮಂತ್, ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT