ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕುಪತ್ರ ವಿತರಿಸಲು ಆಗ್ರಹಿಸಿ ಪ್ರತಿಭಟನೆ

Last Updated 3 ಅಕ್ಟೋಬರ್ 2017, 7:35 IST
ಅಕ್ಷರ ಗಾತ್ರ

ಧಾರವಾಡ: ಶಹರ ವ್ಯಾಪ್ತಿಯ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಹುಮ್ಯಾನಿಟಿ ಫೌಂಡೇಷನ್‌ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.

‘ಶಹರ ವ್ಯಾಪ್ತಿಯ ಹಲವು ಕೊಳೆಗೇರಿ ಪ್ರದೇಶದ ನಿವಾಸಿಗಳ ಪೈಕಿ ಶೇ.30 ರಷ್ಟು ನಿವಾಸಿಗಳಿಗೆ ಮಾತ್ರ ಪರಿಚಯ ಪತ್ರ ನೀಡಲಾಗಿದೆ. ಹಕ್ಕು ಪತ್ರ ವಿತರಿಸಿಲ್ಲ. ಕೊಳಗೇರಿ ಪ್ರದೇಶಗಳಲ್ಲಿ ಅಂದಾಜು 1ಲಕ್ಷ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. ಇಲ್ಲಿನ ನಿವಾಸಿಗಳು ಸಮಯಕ್ಕೆ ಸರಿಯಾಗಿ ಪಾಲಿಕೆ ತೆರಿಗೆ ತುಂಬುತ್ತಿದ್ದರೂ ಕೂಡಾ ಆಸ್ತಿ ಖಾತೆ ಬದಲಾವಣೆ ಆಗಿಲ್ಲ’ ಎಂದು ಮನವಿಯಲ್ಲಿ ದೂರಲಾಗಿದೆ.

‘ಜಿಲ್ಲೆಯಲ್ಲಿ ಅಂದಾಜು 30–40 ವರ್ಷಗಳಿಂದ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಬಡವರು ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಅಲ್ಲದೇ ಆರ್ಥಿಕವಾಗಿ ಸಬಲರಾಗಿಲ್ಲ. ಅವರ ಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಂಡು ರಿಚಯ ಪತ್ರ ನೀಡಬೇಕು. ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಹಸ್ತಾಂತರ ಮಾಡಿ, ಕೂಡಲೇ ಕ್ರಯ ಪತ್ರ ಮಾಡಿಕೊಡಬೇಕು ಹಾಗೂ ಖಾಸಗಿ ಪ್ರದೇಶದಲ್ಲಿರುವ ಕೊಳೆಗೇರಿಗಳ ಭೂಮಿಯನ್ನು ಕಾನೂನಾತ್ಮಕವಾಗಿ ಸ್ವಾಧೀನಪಡಿಸಿಕೊಂಡು ನಿವಾಸಿಗಳಿಗೆ ಹಸ್ತಾಂತರಿಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT