ಸಮಾಜ ಸೇವೆ ಸೋಗಲ್ಲಿ ಬೆದರಿಕೆ: ದೂರು

ಮಂಗಳವಾರ, ಜೂನ್ 18, 2019
24 °C

ಸಮಾಜ ಸೇವೆ ಸೋಗಲ್ಲಿ ಬೆದರಿಕೆ: ದೂರು

Published:
Updated:

ಹಾವೇರಿ: ‘ಸಮಾಜ ಸೇವಕರಂತೆ ನಟಿಸುತ್ತಾ ಅಧಿಕಾರಿ, ಸಿಬ್ಬಂದಿಗೆ ಬೆದರಿಕೆ ಹಾಕುವವರ ಹಾವಳಿ ಹಾವೇರಿಯಲ್ಲಿ ಹೆಚ್ಚಾಗಿದೆ’ ಎಂದು ತಹಶೀಲ್ದಾರ್ ಕಾರ್ಯಾಲಯದ ಸಿಬ್ಬಂದಿ ದೂರಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸ್ ಠಾಣೆಯಲ್ಲಿ ಈಚೆಗೆ ನಾಗೇಂದ್ರನಮಟ್ಟಿಯ ಚಂದ್ರು ಗೋವಿಂದಪ್ಪ ಅರೆಪಲ್ಲೆ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

‘ಅವಾಚ್ಯ ಪದಗಳಿಂದ ನಿಂದನೆ, ಕೆಲಸ ಮಾಡದಿದ್ದರೆ ವರ್ಗಾವಣೆ ಮಾಡಿಸುತ್ತೇನೆ ಎಂಬಿತ್ಯಾದಿ ಬೆದರಿಕೆ ಹಾಕಿದ್ದಾನೆ’ ಎಂದು ಮಹಿಳಾ ಸಿಬ್ಬಂದಿ ದೂರು ನೀಡಿರುವುದಾಗಿ ಪೊಲೀಸರು ದೃಢ ಪಡಿಸಿದ್ದಾರೆ.

‘ರಾಜಕೀಯ ಪ್ರಭಾವ ಬಳಸಿಕೊಂಡು ಒತ್ತಡ ಹೇರುವವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಸಿಬ್ಬಂದಿ ಒತ್ತಾಯಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry