ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಹಿಂಸೆಯಿಂದ ಸ್ವಾತಂತ್ರ್ಯ ತಂದವರು ಗಾಂಧಿ’

Last Updated 3 ಅಕ್ಟೋಬರ್ 2017, 8:56 IST
ಅಕ್ಷರ ಗಾತ್ರ

ಬ್ಯಾಡಗಿ:‘ದೇಶದ ಸ್ವಾತಂತ್ರ್ಯಕಾಗಿ ಶಾಂತಿ ಮತ್ತು ಅಹಿಂಸೆಯ ಮೂಲಕ ಹೋರಾಟ ನಡೆಸಿದ ಮಹಾತ್ಮಾ ಗಾಂಧೀಜಿಯವರನ್ನು ಸ್ಮರಿಸುವ ಮೂಲಕ, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ನಡೆದ ‘ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ ಬಹಾದ್ಧೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

‘ದೇಶದ ಉದ್ದಗಲಕ್ಕೂ ಸಂಚರಿಸಿ ಯುವಕರಲ್ಲಿ ಸ್ವಾತಂತ್ರ್ಯದ ಬಗ್ಗೆ ಸ್ಫೂರ್ತಿ ತುಂಬವ ಮೂಲಕ, ಒಗ್ಗಟ್ಟಿನ ಹೋರಾಟಕ್ಕೆ ಮುನ್ನಡಿ ಬರೆದವರು ಮಹಾತ್ಮಾ ಗಾಂಧೀಜಿಯವರು. ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ನಂಬಿದ್ದವರು ಅವರು.

ತಾಲ್ಲೂಕು ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷ ಡಿ.ಎಚ್‌.ಬುಡ್ಡನಗೌಡ್ರ ಮಾತನಾಡಿ, ‘ಮಾಜಿ ಪ್ರಧಾನಿ ಲಾಲ್‌ ಬಹದ್ಧೂರ್‌ ಶಾಸ್ತ್ರಿಯವರು ದೇಶ ಕಂಡ ಅಪ್ರತಿಮ ನಾಯಕರಲ್ಲಿ ಒಬ್ಬರು. ಸರಳತೆಯ ಪ್ರತೀಕವಾಗಿದ್ದ ಅವರು ಜೈ ಜವಾನ, ಜೈ ಕಿಸಾನ ಎಂದು ಘೋಷಣೆಯ ಮೂಲಕ ಸೈನಿಕರಲ್ಲಿ ಹಾಗೂ ರೈತರಲ್ಲಿ ಸ್ಫೂರ್ತಿ ತುಂಬಿದವರು’ ಎಂದರು.

ಪುರಸಭೆ ಸದಸ್ಯ ಮಂಜುನಾಥ ಭೋವಿ, ದುರ್ಗೇಶ ಗೋಣೆಮ್ಮನವರ, ಕಾಂಗ್ರೆಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಬೀರಪ್ಪ ಬಣಕಾರ, ಮುಖಂಡರಾದ ಮೋಹನ ಕತ್ತಿ, ಹುಚ್ಚನಗೌಡ ಲಿಂಗನಗೌಡ್ರ, ಶಂಕರಗೌಡ ಪಾಟೀಲ ಹಾಗೂ ಮಜೀದ ಮುಲ್ಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT