ಮುಂದಿನ ಸಿಎಂ ವಿಷಯ: ಕೆಲವರು ತಮ್ಮ ದೃಷ್ಟಿಕೋನದಲ್ಲಿ ವಿಶ್ಲೇಷಣೆ ಮಾಡಿದ್ದಾರೆ– ಸಿದ್ದರಾಮಯ್ಯ

ಗುರುವಾರ , ಜೂನ್ 20, 2019
30 °C

ಮುಂದಿನ ಸಿಎಂ ವಿಷಯ: ಕೆಲವರು ತಮ್ಮ ದೃಷ್ಟಿಕೋನದಲ್ಲಿ ವಿಶ್ಲೇಷಣೆ ಮಾಡಿದ್ದಾರೆ– ಸಿದ್ದರಾಮಯ್ಯ

Published:
Updated:
ಮುಂದಿನ ಸಿಎಂ ವಿಷಯ: ಕೆಲವರು ತಮ್ಮ ದೃಷ್ಟಿಕೋನದಲ್ಲಿ ವಿಶ್ಲೇಷಣೆ ಮಾಡಿದ್ದಾರೆ– ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಗಿಮಿಕ್ ಕರ್ನಾಟಕದಲ್ಲಿ ನಡೆಯುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.

ಮಾತಿನ ಮೋಡಿಯಿಂದ ಜನರನ್ನು ಹಿಡಿದಿಡಲು ಸಾಧ್ಯವಿಲ್ಲ. ಜನರಿಗೆ ಸತ್ಯದ ಅರಿವಾಗುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿ ಗೆಲ್ಲುವುದಿಲ್ಲ ಎಂದರು.

ಮುಂದಿನ ಮುಖ್ಯಮಂತ್ರಿಯ ಕುರಿತು ಹಲವರು ಆಶಾಗೋಪುರ ಕಟ್ಟಿಕೊಂಡಿದ್ದಾರೆ. ಭ್ರಮಾಲೋಕದಲ್ಲಿ ಇರಬೇಡಿ ಎಂದು ಹೇಳಲಾಗದು. ಯಡಿಯೂರಪ್ಪ ಅವರು ಉಪಚುನಾವಣೆಯ ಸಂದರ್ಭದಿಂದಲು ಭ್ರಮೆಯಲ್ಲಿ ಇದ್ದಾರೆ ಎಂದು ಹೇಳಿದರು.

ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿ ನಡೆಯುತ್ತದೆ ಎಂದು ಹೈಕಮಾಂಡ್ ಹೇಳಿದೆ. ಮುಂದಿನ ದಸರಾದಲ್ಲಿಯೂ ನಾವೇ ನಂದಿ ಧ್ವಜ ಪೂಜೆ ಮಾಡುತ್ತೇವೆ ಅಂಥ ಹೇಳಿದ್ದೆ. ಇದನ್ನು ಕೆಲವರು ತಮ್ಮ ದೃಷ್ಟಿಕೋನದಲ್ಲಿ ವಿಶ್ಲೇಷಣೆ ಮಾಡಿಕೊಂಡಿದ್ದಾರೆ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry